ಕೇಂದ್ರ ಬಜೆಟ್ ನಿರಾಶಾದಾಯಕವಾಗಿದೆ: ಮಾಜಿ ಸಚಿವ ರಮನಾಥ ರೈ

Date:

ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಿರಾಶಾದಾಯಕವಾಗಿದೆ. ವಿತ್ತ ಸಚಿವರು ಕೇವಲ ಭರವಸೆ ಕೊಡುವ ಚುನಾವಣಾ ಭಾಷಣ ಮಾಡಿದರೋ ಅಥವಾ ಆಯವ್ಯಯ ಪತ್ರ ಮಂಡಿಸಿದರೋ ಎಂಬ ಸಂಶಯ ಬರುತ್ತಿದೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

ಗುರುವಾರ ಸಂಸತ್‌ನಲ್ಲಿ ವಿತ್ತ ಸಚಿವ ನಿರ್ಮಲಾ ಸೀತಾರಾಮನ್ ಅವರು ಬಜೆಟ್‌ ಮಂಡಿಸಿದ್ದಾರೆ. ಬಜೆಟ್‌ ಬಗ್ಗೆ ಪ್ರತಿಕ್ರಿಯಿಸಿರುವ ರಮಾನಾಥ ರೈ, “ಪ್ರಗತಿ, ಬೆಳವಣಿಗೆ, ಧ್ಯೇಯ, ಆಧ್ಯತೆ, ಗಮನ, ಸಹಾಯ, ಬೆಂಬಲ, ಸಹಕಾರ, ಕ್ರಮ, ಕಾರ್ಯಕ್ರಮ, ಮಂತ್ರ ಎಂಬ ಪದಗಳನ್ನು ಸಚಿವೆ ಹೇಳಿದರೆ, ಹೊರತು ನಿರ್ದಿಷ್ಟವಾಗಿ ಅನುದಾನ ಹಂಚಿಕೆ ಮಾಡಿಲ್ಲ. ಈ ಬಜೆಟ್ ಪ್ರಾದೇಶಿಕತೆಯನ್ನು ಮರೆತಿದೆ. ವಲಯಗಳನ್ನು ಕಡೆಗಣಿಸಿದೆ. ವರ್ಗಗಳನ್ನು ನಿರ್ಲಕ್ಷ್ಯ ಮಾಡಿದೆ” ಎಂದು ಆರೋಪಿಸಿದ್ದಾರೆ.

“ಯುವಕರು, ಅನ್ನದಾತರು, ಬಡವರು, ಮಹಿಳೆಯರಿಗೆ ಆದ್ಯತೆ ನೀಡುತ್ತೇವೆ ಎಂದು ಭಾಷಣ ಮಾಡಿದ್ದಾರೆ. ಆದರೆ, ಬಜೆಟ್‌ನಲ್ಲಿ ಈ ವರ್ಗಕ್ಕೆ ವಿಶೇಷವಾಗಿ ಏನನ್ನೂ ಘೋಷಣೆ ಮಾಡಿಲ್ಲ. ಅಲ್ಲದೆ, ಮೋದಿ ಸರ್ಕಾರದ ಬಜೆಟ್‌ನಲ್ಲಿ ಸಮಗ್ರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇದು ಮೋದಿ ಸರ್ಕಾರದ ಅಂತಿಮ ಬಜೆಟ್ ಆಗಲಿದೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಪ್ರಗತಿ ಹಿನ್ನಡೆಯ ಸಂಕೇತ: ಎಂಎಲ್‌ಸಿ ಕೆ ಹರೀಶ್ ಕುಮಾರ್

ಬಜೆಟ್‌ನಲ್ಲಿ ಬಿಜೆಪಿ ಸರ್ಕಾರ ಹೇಳುತ್ತಿರುವ ದೇಶದ ಅಭಿವೃದ್ಧಿ ಶಕೆ ಕನ್ನಡಿಯೊಳಗಿನ ಗಂಟು ಇದ್ದಂತೆ. ದೇಶದ ಪ್ರಗತಿ ಹಿನ್ನಡೆ ಕಂಡಿರುವ ಈ ಕಾಲಘಟ್ಟದಲ್ಲಿ ನಿರ್ಮಲಾ ಸೀತಾರಾಮನ್ ಅವರು ಈ ರೀತಿಯ ಬಜೆಟ್ ಅಲ್ಲದೆ ಬೇರೇನು ಮಂಡಿಸಲು ಸಾಧ್ಯವಿಲ್ಲ ಎಂದು ವಿಧಾನ ಪರಿಷತ್ ಸದಸ್ಯ, ದಕ್ಷಿಣ ಕನ್ನಡ ಜಿಲ್ಲಾ ಕಾಂಗೆಸ್ ಅಧ್ಯಕ್ಷ ಕೆ ಹರೀಶ್ ಕುಮಾರ್ ಹೇಳಿದ್ದಾರೆ.

ಕಾರ್ಪೊರೇಟ್ ಸಂಸ್ಥೆಗಳ ಅಡಿಯಾಳಾಗಿರುವ ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಿ ಬಡವರು, ಮಧ್ಯಮ ವರ್ಗಕ್ಕೆ ಯಾವುದೇ ಯೋಜನೆ ಘೋಷಿಸಿಲ್ಲ. ನಿಜಕ್ಕೂ ನಿರಾಶದಾಯಕ ಬಜೆಟ್ ಇದಾಗಿದ್ದು, ಮುಂದೆ ಆಡಳಿತಕ್ಕೆ ಬರುವ ವಿಶ್ವಾಸ ಬಿಜೆಪಿಯವರಿಗಿಲ್ಲ ಎಂದು ಕೆ ಹರೀಶ್ ಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ನೇಹಾ ಕೊಲೆ ಆರೋಪಿಯನ್ನು ಗಲ್ಲಿಗೇರಿಸುವಂತೆ ದಲಿತ ವಿದ್ಯಾರ್ಥಿ ಪರಿಷತ್ ಒತ್ತಾಯ

ನೇಹಾ ಹಿರೇಮಠ್ ವಿದ್ಯಾರ್ಥಿನಿಯನ್ನು ಭೀಕರವಾಗಿ ಕೊಲೆ ಮಾಡಿರುವ ಆರೋಪಿಯನ್ನು ಗಲ್ಲಿಗೇರಿಸಬೇಕು ಎಂದು...

ʼಈ ದಿನʼ ಸಮೀಕ್ಷೆ | ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಹಂಚಿಕೆಯಲ್ಲಿ ಅನ್ಯಾಯ; ಮೋದಿಯ ನಿಜಮುಖ ಅರಿತ ಜನ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದಕ್ಷಿಣದ ರಾಜ್ಯಗಳಿಗೆ ಭಾರೀ...

ಬೀದರ್‌ | ಬಿಜೆಪಿಯಿಂದ ಸಂವಿಧಾನ ಆಶಯಗಳು ಬುಡಮೇಲು : ಡಿ.ಜಿ.ಸಾಗರ್

ದೇಶದಲ್ಲಿ ಪ್ರತಿ ಆರು ನಿಮಿಷಗಳಿಗೊಂದು ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಈ...