ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಮನೆಗೆ ಬೆಂಕಿ; ಆರೋಪಿಗಳಲ್ಲಿ ಬಿಜೆಪಿಯ ಮಾಜಿ ಶಾಸಕನ ಹೆಸರು

Date:

  • ಉನ್ನಾವೋ ಜಿಲ್ಲೆಯಲ್ಲಿ ಬಾಲಕಿ ಮೇಲೆ 2017ರಲ್ಲಿ ಸಾಮೂಹಿಕ ಅತ್ಯಾಚಾರ
  • ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಮೌರವಾನ್ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಸಾಮೂಹಿಕ ಅತ್ಯಾಚಾರ ಆರೋಪಿಗಳು ಬೆಂಕಿ ಹಚ್ಚಿರುವ ಘಟನೆ ಸೋಮವಾರ (ಏಪ್ರಿಲ್ 17) ರಾತ್ರಿ ವರದಿಯಾಗಿದೆ.

ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯಲ್ಲಿ 2017ರ ಜೂನ್‌ 4ರಂದು ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಈ ಪ್ರಕರಣದಲ್ಲಿ ಪ್ರಮುಖ ಅಪರಾಧಿಯಾಗಿರುವ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಈಗಾಗಲೇ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಾನೆ.

ಸಂತ್ರಸ್ತೆ 2018 ಏಪ್ರಿಲ್ 8ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ನಿವಾಸದಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಘಟನೆಯಲ್ಲಿ ಬೆಂಕಿಯಿಂದ ಸಂತ್ರಸ್ತೆಯ ಮನೆಯಲ್ಲಿನ ಎರಡು ಶಿಶುಗಳಿಗೆ ಸುಟ್ಟ ಗಾಯಗಳಾಗಿವೆ. ತನ್ನ ಮಗಳ ಮೇಲೆ ಅತ್ಯಾಚಾರಗೈದ ಪೀಡಕರು ಆಕೆಯ ಮಾವ ಹಾಗೂ ಮೈದುನನ ಜೊತೆ ಸೇರಿ ಮನೆಗೆ ಬೆಂಕಿ ಹಚ್ಚಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಆರೋಪಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿ, ಸಂತ್ರಸ್ತೆಯ ಮಾವ ಹಾಗೂ ಮೈದುನ ಸೇರಿ ಸಂತ್ರಸ್ತೆಯ ಮನೆಗೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸ್ ಅಧಿಕಾರಿ ಪುರ್ವಾ ಸಂತೋಷ್ ಕುಮಾರ್ ಹೇಳಿದ್ದಾರೆ.

“ಘಟನೆ ಬಗ್ಗೆ ಸಂತ್ರಸ್ತೆ ನೀಡಿದ ದೂರಿನ ಆಧಾರದಲ್ಲಿ ಆರೋಪಿಗಳ ವಿರುದ್ಧ ನಾನಾ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಸಲಾಗುತ್ತಿದೆ” ಎಂದು ಅವರು ಹೇಳಿದರು.

“ಬೆಂಕಿ ದುರಂತದಲ್ಲಿ ಸಂಬಂಧಿಯ ಮೂರು ತಿಂಗಳ ಹೆಣ್ಣು ಶಿಶು, ಉನ್ನಾವೋ ಸಂತ್ರಸ್ತೆಯ ನಾಲ್ಕು ತಿಂಗಳ ಶಿಶುವಿಗೆ ಗಾಯಗಳಾಗಿವೆ. ಚಿಕಿತ್ಸೆಗೆ ಶಿಶುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ” ಎಂದು ಅಧಿಕಾರಿ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಜ್ಞಾನವಾಪಿ ಮಸೀದಿ | ‘ವಝು’ಗೆ ಅವಕಾಶ ಕಲ್ಪಿಸಲು ಸಭೆ ಮೂಲಕ ತೀರ್ಮಾನಕ್ಕೆ ಸುಪ್ರೀಂಕೋರ್ಟ್‌ ಸೂಚನೆ

ಉನ್ನಾವೋ ಪ್ರಕರಣದ ಆರೋಪಿಗಳು ಜಾಮೀನಿನ ಮೇಲೆ ಹೊರ ಬಂದಿದ್ದರು. 2019ರಲ್ಲಿ ಯುವತಿ ಕೊಲೆಗೆ ಯತ್ನ ನಡೆದಿತ್ತು. ವಕೀಲರ ಜತೆ ಕೋರ್ಟ್‌ಗೆ ಹೋಗುತ್ತಿದ್ದಾಗ ಆಕೆಯ ಕಾರ್‌ಗೆ ಅಪಘಾತ ಮಾಡಿಸಲಾಗಿತ್ತು. ಈ ಅಪಘಾತದಲ್ಲಿ ವಕೀಲ ಮತ್ತು ಆಕೆಯ ಚಿಕ್ಕಪ್ಪ ಮೃತಪಟ್ಟಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಂಫಾಲ| ಮಣಿಪುರವನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ ಎಂದ ಅಮಿತ್ ಶಾ!

ಮಣಿಪುರದ ಜನರನ್ನು ವಿಭಜಿಸಲು ಪಿತೂರಿ ಮಾಡಲಾಗುತ್ತಿದೆ, ಆದರೆ ಬಿಜೆಪಿ ರಾಜ್ಯದ ವಿಭಜನೆಗೆ...

ಚುನಾವಣಾ ಬಾಂಡ್ ಯೋಜನೆ ರದ್ದುಗೊಳಿಸಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ!

ಕೇಂದ್ರ ನರೇಂದ್ರ ಮೋದಿ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ರದ್ದುಗೊಳಿಸಿದ ಫೆಬ್ರವರಿ...

ಒಡಿಶಾ| ಮೇಲ್ಸೇತುವೆಯಿಂದ ಬಿದ್ದ ಬಸ್‌; ಐವರು ಸಾವು, ಹಲವರಿಗೆ ಗಾಯ

ಒಡಿಶಾದ ಜಾಜ್‌ಪುರ ಜಿಲ್ಲೆಯ ಬಾರಾಬತಿ ಬಳಿಯ ರಾಷ್ಟ್ರೀಯ ಹೆದ್ದಾರಿ-16ರಲ್ಲಿ ಸುಮಾರು 50...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ...