ಧಾರವಾಡ | ಗ್ರಾಮದಲ್ಲಿ ಅಸ್ಪೃಶ್ಯತೆ ಇನ್ನೂ ಜೀವಂತ; ದಲಿತರಿಗೆ ಹೋಟೆಲ್, ಸಲೂನ್‌ಗಳಿಗಿಲ್ಲ ಪ್ರವೇಶ

Date:

ಭಾರತವನ್ನು ಕಾಡುತ್ತಿರುವ ಮೂಲಭೂತ ಸಮಸ್ಯೆಗಳಲ್ಲಿ ಜಾತಿ ವ್ಯವಸ್ಥೆಯೂ ಒಂದು. ಅಸ್ಪೃಶ್ಯತೆಯನ್ನು ತಡೆಯಲು ನಾನಾ ಕಾನೂನುಗಳಿದ್ದರೂ, ಅಸ್ಪೃಶ್ಯತೆಯ ಪಿಡುಗು ಇನ್ನೂ ಸಮಾಜವನ್ನು ತೊರೆದಿಲ್ಲ. ಮೇಲು-ಕೀಳು, ಬಲಿಷ್ಟ-ಕನಿಷ್ಟವೆಂದು ಜಾತಿ ಆಧಾರದಲ್ಲಿ ಮನುಷ್ಯನನ್ನು ನೋಡುವ, ಮನುಷ್ಯನನ್ನು ಮುಟ್ಟಿಸಿಕೊಳ್ಳದೆ ದೂರವಿಡುವ ಕೀಳು ವ್ಯವಸ್ಥೆ ಇನ್ನೂ ಮುಂದುವರೆದಿದೆ. ಅಸ್ಪೃಶ್ಯತಾ ಆಚರಣೆಗಳು ಅಲ್ಲಿಲ್ಲಿ ಬೆಳಕಿಗೆ ಬರುತ್ತಲೇ ಇವೆ. ಇದೀಗ, ಅಂತಹದ್ದೇ ಪ್ರಕರಣವೊಂದು ಧಾರವಾಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಜಿಲ್ಲೆಯ ರೊಟ್ಟಿಗವಾಡ ಗ್ರಾಮದಲ್ಲಿ ದಲಿತರನ್ನು ಸಾಮುದಾಯಿಕವಾಗಿ ದೂರವಿಟ್ಟು ಅಸ್ಪೃಶ್ಯತೆ ಆಚರಣೆ ಮಾಡಲಾಗುತ್ತಿದೆ. ನೂರಾರು ವರ್ಷಗಳಿಂದ ಗ್ರಾಮದ ಹೋಟೆಲ್, ಸಲೂನ್ ಹಾಗೂ ದೇವಸ್ಥಾನಗಳಿಗೆ ದಲಿತರಿಗೆ ಪ್ರವೇಶವನ್ನು ನಿರಾಕರಿಸಲಾಗಿದೆ.

ಗ್ರಾಮದ ಸಲೂನ್‌ಗಳಲ್ಲಿ ದಲಿತರಿಗೆ ಕಟಿಂಗ್-ಶೇವಿಂಗ್ ಮಾಡಲಾಗುತ್ತಿಲ್ಲ. ಹೋಟೆಲ್‌ಗಳಲ್ಲಿ ದಲಿತರನ್ನು ದೂರ ಕೂರಿಸಿ, ಪ್ಲಾಸ್ಟಿಕ್‌ ಪ್ಲೇಟ್‌ಗಳಲ್ಲಿ ಆಹಾರ ನೀಡಲಾಗುತ್ತದೆ. ಲೋಟಗಳನ್ನು ಮುಟ್ಟಲು ಬಿಡದೆ, ನೀರನ್ನು ದೂರದಿಂದ ಆ ತಟ್ಟೆಗೆ ಸುರಿಯುವ ಅಥವಾ ಬೊಗಸೆಯಲ್ಲಿ ಕುಡಿಸಲಾಗುತ್ತದೆ ಎಂಬುದು ತಿಳಿದುಬಂದಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಗ್ರಾಮದಲ್ಲಿ ಪ್ರಬಲ ಜಾತಿಗರು ಮತ್ತು ದಲಿತರ ನಡುವೆ ದೊಡ್ಡ ಅಂತರವಿದೆ. ದಲಿತ ಸಮುದಾಯದಲ್ಲಿ ಯಾರಾದರೂ ಮೃತಪಟ್ಟರೆ, ಅಂದು ಗ್ರಾಮದ ಎಲ್ಲ ಅಂಗಡಿಗಳನ್ನು ಮುಚ್ಚಲಾಗುತ್ತದೆ. ಮೃತರ ಅಂತಿಮ ಸಂಸ್ಕಾರಕ್ಕಾಗಿ ಬರುವವರು ಅಂಗಡಿಗೆ ಬರುತ್ತಾರೆ ಎಂಬ ಕಾರಣಕ್ಕೆ ಎಲ್ಲ ಅಂಗಡಿಗಳನ್ನು ಬಂದ್‌ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...