ಉಪ್ಪಿನಂಗಡಿ : ಹೆದ್ದಾರಿ ಬದಿ ನಿಲ್ಲಿಸಿದ್ದ ಲಾರಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಚಾಲಕ

Date:

ಎರಡು ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಪಕ್ಕ ನಿಲ್ಲಿಸಿದ್ದ ಲಾರಿಯೊಂದರಲ್ಲಿ ಚಾಲಕ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.

ಮಂಗಳೂರು ಕಡೆಯಿಂದ ಬಂದಿದ್ದ ಲಾರಿ ಎರಡು ದಿನಗಳ ಹಿಂದೆ ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಸಿಟಿ ಲ್ಯಾಂಡ್ ಹೊಟೇಲ್ ಸಮೀಪ ನಿಲ್ಲಿಸಲಾಗಿತ್ತು. ಎರಡು ದಿನಗಳಾದರೂ ಅಲ್ಲಿಂದ ತೆರಳಿರಲಿಲ್ಲ. ಈ ಹಿನ್ನೆಲೆಯಲ್ಲಿ ಅನುಮಾನಗೊಂಡ ಸ್ಥಳೀಯರು, ಇಂದು(ಡಿ‌.29) ಬೆಳಗ್ಗೆ ಲಾರಿಯೊಳಗೆ ಇಣುಕಿದ್ದಾರೆ. ಈ ವೇಳೆ ವಯಸ್ಸಾದ ಚಾಲಕರೋರ್ವರು ಮಲಗಿದ್ದ ಸ್ಥಿತಿಯಲ್ಲಿದ್ದರು. ಎಬ್ಬಿಸಲು ಯತ್ನಿಸಿದಾಗ ಎದ್ದಿರಲಿಲ್ಲ. ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದು ಬಂದಿದೆ.

ಕೂಡಲೇ ಉಪ್ಪಿನಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಮೃತದೇಹವನ್ನು ಉಪ್ಪಿನಂಗಡಿ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಬಗ್ಗೆ ಈ ದಿನ.ಕಾಮ್ ಜೊತೆಗೆ ಮಾತನಾಡಿದ ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್ ಐ ರಾಜೇಶ್ ಕೆ ವಿ, “ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದೇವೆ. ಮೃತಪಟ್ಟ ಚಾಲಕನನ್ನು ಖಲೀಲ್ ಖಾನ್(50) ಎಂದು ತಿಳಿದು ಬಂದಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ನಿವಾಸಿ ಎಂದು ಸದ್ಯಕ್ಕೆ ಮಾಹಿತಿ ದೊರಕಿದೆ. ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಪ್ರಾಥಮಿಕವಾಗಿ ತಿಳಿದುಬಂದಿದೆ. ಕುಟುಂಬದ ಸದಸ್ಯರನ್ನು ಸಂಪರ್ಕಿಸುವ ಪ್ರಯತ್ನ ಮಾಡುತ್ತಿದ್ದೇವೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಿದ್ದೇವೆ. ಲಾರಿಯಲ್ಲಿ ಯಾವುದೇ ಲೋಡ್ ಇರಲಿಲ್ಲ. ಮಂಗಳೂರು ಕಡೆಯಿಂದ ಬಂದಿತ್ತು” ಎಂದು ಮಾಹಿತಿ ನೀಡಿದ್ದಾರೆ.

ಲಾರಿಯ ಮಾಲೀಕನಿಗೆ ಮಾಹಿತಿ ನೀಡಿದ್ದ ಖಲೀಲ್ ಖಾನ್
“ಮೃತಪಟ್ಟ ಲಾರಿಯ ಚಾಲಕ ಖಲೀಲ್ ಖಾನ್, ಪಿರಿಯಾಪಟ್ಟಣ ಮೂಲದ ಲಾರಿಯ ಮಾಲೀಕನಿಗೆ ಕರೆ ಮಾಡಿ, ‘ತನಗೆ ಎದೆನೋವು ಆಗುತ್ತಿದೆ’ ಎಂದು ತಿಳಿಸಿದ್ದರು ಎಂಬ ಅಂಶ ತಿಳಿದುಬಂದಿದೆ. ಆದರೆ ಮಾಲೀಕ ನಿರ್ಲಕ್ಷ್ಯ ಮಾಡಿದ್ದರು. ಇಂದು ಬೆಳಗ್ಗೆ ಅವರು ಮೃತಪಟ್ಟಿದ್ದು ಗೊತ್ತಾಗಿದೆ” ಎಂದು ಉಪ್ಪಿನಂಗಡಿಯ ಸ್ಥಳೀಯರೊಬ್ಬರು ಈ ದಿನ.ಕಾಮ್‌ಗೆ ಮಾಹಿತಿ ನೀಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ; ಚಿಕಿತ್ಸೆಗಾಗಿ ಸ್ಥಳೀಯರ ಪರದಾಟ

ಸರ್ಕಾರ ಸುಸಜ್ಜಿತ ಆರೋಗ್ಯ ಉಪಕೇಂದ್ರಗಳನ್ನು ನಿರ್ಮಿಸಿದ್ದರೂ, ವೈದ್ಯರು ಲಭ್ಯವಿಲ್ಲದ ಕಾರಣ ಹುಣಶ್ಯಾಳ...

ಮಂಡ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ; ‘ಏನೇನೋ ಅಂದ್ಕೊಬೇಡಿ’ ಎಂದ ನಟ ದರ್ಶನ್

ಸದ್ಯ ಲೋಕಸಭಾ ಚುನಾವಣೆ ರಂಗೇರಿದ್ದು, ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗಿದೆ. ಮಂಡ್ಯದ...

ರಾಯಚೂರು | ಸುಳ್ಳು ಜಾತಿ ಪ್ರಮಾಣಪತ್ರ ಸಲ್ಲಿಕೆ ಆರೋಪ; ಬಿಜೆಪಿ ಅಭ್ಯರ್ಥಿ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ರಾಯಚೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯ್ಕ ಅವರ...