ಅವಧೇಶ್‌ ರಾಯ್‌ ಹತ್ಯೆ ಪ್ರಕರಣ | ಮುಖ್ತಾರ್‌ ಅನ್ಸಾರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ವಾರಾಣಸಿ ಕೋರ್ಟ್‌

Date:

  • 1991ರಲ್ಲಿ ಅವಧೇಶ್ ರಾಯ್‌ ಹತ್ಯೆ ಮಾಡಿದ್ದ ಮುಖ್ತಾರ್‌ ಅನ್ಸಾರಿ
  • ಅಜಯ್ ರಾಯ್ ಅವರ ನಿವಾಸದ ಎದುರು ಅವಧೇಶ್‌ ರಾಯ್‌ ಹತ್ಯೆ

ಕಾಂಗ್ರೆಸ್ ನಾಯಕ ಅವಧೇಶ್ ರಾಯ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಮಾಜಿ ಶಾಸಕ, ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿ ದೋಷಿ ತೀರ್ಮಾನಿಸಿರುವ ವಾರಾಣಸಿ ಸಂಸದರು ಶಾಸಕರ ನ್ಯಾಯಾಲಯ ಸೋಮವಾರ (ಜೂನ್ 5) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಮೂವತ್ತು ವರ್ಷಗಳಿಂದ ಪ್ರಕರಣ ನ್ಯಾಯಾಲಯದಲ್ಲಿ ನಡೆಯುತ್ತಿತ್ತು.

1991ರ ಆಗಸ್ಟ್ 3 ರಂದು ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರಾಯ್ ಅವರನ್ನು ವಾರಾಣಸಿಯ ಅವರ ಲಾಹುರಬೀರ್ ನಿವಾಸದ ಎದುರೇ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ಮುಖ್ತಾರ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದರು.

“ಮುಖ್ತಾರ್ ಅನ್ಸಾರಿ ಅವರನ್ನು 1991ರ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ದೋಷಿ ಎಂದು ತೀರ್ಮಾನಿಸಲಾಗಿದೆ. ದಿನದ ಬಳಿಕ ನ್ಯಾಯಾಲಯ ಪ್ರಕರಣದ ತೀರ್ಪು ಪ್ರಕಟಿಸಲಿದೆ” ಎಂದು ವಾರಾಣಸಿಯಲ್ಲಿ ವಕೀಲರೊಬ್ಬರು ಸುದ್ದಿಗಾರರಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಗೃಹ ಸಚಿವ ಅಮಿತ್ ಶಾ ಭೇಟಿಯಾದ ಕುಸ್ತಿಪಟುಗಳು | ತ್ವರಿತ ಕ್ರಮ, ನಿಷ್ಪಕ್ಷಪಾತ ತನಿಖೆಗೆ ಆಗ್ರಹ

“ಹಲವು ವರ್ಷಗಳ ನಮ್ಮ ಕಾಯುವಿಕೆ ಇಂದು ಕೊನೆಗೊಂಡಿದೆ. ನ್ಯಾಯಕ್ಕಾಗಿ ನಾನು, ನನ್ನ ತಂದೆ ತಾಯಿ, ಅವಧೇಶನ ಮಗಳು ಮತ್ತು ಇಡೀ ಕುಟುಂಬ ತಾಳ್ಮೆಯಿಂದ ಕಾಯುತ್ತಿದ್ದೆವು. ಸರ್ಕಾರಗಳು ಬಂದವು, ಹೋದವು, ಆದರೆ ಮುಖ್ತಾರ್ ಗೆ ಶಿಕ್ಷೆಯಾಗಲಿಲ್ಲ” ಎಂದು ಅಜಯ್ ರಾಯ್ ಹೇಳಿದರು.

“ಆದರೆ ನಾವು ಧೃತಿಗೆಡಲಿಲ್ಲ. ನಮ್ಮ ವಕೀಲರ ಸತತ ಪ್ರಯತ್ನದಿಂದ ಇಂದು ನನ್ನ ಸಹೋದರನ ಹತ್ಯೆ ಪ್ರಕರಣದಲ್ಲಿ ಮುಖ್ತಾರ್ ಅನ್ಸಾರಿ ಆರೋಪಿಯನ್ನು ತಪ್ಪಿತಸ್ಥ ಎಂದು ತೀರ್ಪು ನೀಡಿರುವುದು ಸಂತಸವಾಗಿದೆ” ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಮುಖ್ತಾರ್‌ಗೆ ಜೀವಾವಧಿ ಶಿಕ್ಷೆ ವಿಧಿಸಿರುವುದನ್ನು ಅವಧೇಶ್‌ ರಾಯ್‌ ಕುಟುಂಬ ಸ್ವಾಗತಿಸಿದೆ. “ಸತ್ಯ ಒಂದಲ್ಲ ಒಂದು ದಿನ ಬೆಳಕಿಗೆ ಬರಬೇಕು. ಈಗ ನಮಗೆ ನ್ಯಾಯ ದೊರಕಿದೆ. ಅಪರಾಧಿಗೆ ಶಿಕ್ಷೆ ದೊರೆತಿದೆ ಇದಕ್ಕೆ ನ್ಯಾಯಾಲಯ ಮತ್ತು ನಮ್ಮ ಪರವಾಗಿ ಹೋರಾಡಿದ ವಕೀಲರಿಗೆ ಧನ್ಯವಾದ” ಎಂದು ಅಜಯ್‌ ರಾಯ್‌ ತಿಳಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಲೆಯೇರಿಕೆ, ನಿರುದ್ಯೋಗ, ರೈತರ ಬಗ್ಗೆ ಪ್ರಧಾನಿ ಮೋದಿ ತುಟಿಯೇ ಬಿಚ್ಚಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆಯೇ ಮಾಡುವುದಿಲ್ಲ. ಕೇವಲ...

ಮೋದಿಯವರ ‘ಚಾರ್‌ ಸವ್ ಪಾರ್’ ಘೋಷಣೆ ಹಿಂದಿನ ಉದ್ದೇಶವೇನು? ಅರಿತಿದ್ದಾರೆಯೇ ‘ಒಬಿಸಿ’ಗಳು!

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಸಂವಿಧಾನದ ಮೂಲ ರಚನೆಯನ್ನು ಬದಲಾಯಿಸುವುದಿಲ್ಲ. ಮೀಸಲಾತಿಯನ್ನು...

ಭಯಗೊಂಡಿರುವ ಪ್ರಧಾನಿ ವೇದಿಕೆಯಲ್ಲೇ ಕಣ್ಣೀರು ಹಾಕಬಹುದು: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ನಡೆಸಿರುವ ವಾಗ್ದಾಳಿಗೆ ತಿರುಗೇಟು ನೀಡಿರುವ...

ರಣಹೇಡಿ ನಾನಲ್ಲ, ಗಿಫ್ಟ್ ಕೂಪನ್ ಕೊಡುವವರು ರಣಹೇಡಿಗಳು: ಡಿಕೆಶಿಗೆ ಕುಮಾರಸ್ವಾಮಿ ತಿರುಗೇಟು

ರಣಹೇಡಿ ನಾನಲ್ಲ, ನೇರವಾಗಿ ಚುನಾವಣೆ ಎದುರಿಸಲಾಗದೆ ರಾತ್ರೋರಾತ್ರಿ ಮತದಾರರಿಗೆ QR ಕೋಡ್...