ವೀರಶೈವ, ಲಿಂಗಾಯತ ಒಡೆಯುವ ಕೆಲಸ ಮಾಡಬೇಡಿ: ಜಗದೀಶ್ ಶೆಟ್ಟರ್

Date:

ವೀರಶೈವ, ಲಿಂಗಾಯತ ಬೇರೆ ಬೇರೆ ಅನ್ನೋ ಅರ್ಥದಲ್ಲಿ ಬಿಂಬಿಸಲಾಗುತ್ತಿತ್ತು. ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಿ ಅಂತ ನಾನು ಹೇಳಿದ್ದೆ. ಈಗಲೂ ನನ್ನ ಮಾತಿಗೆ ನಾನು ಬದ್ಧವಾಗಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಲಿಂಗಾಯತ ಪ್ರತ್ಯೇಕ ಧರ್ಮದ ಹೆಸರಲ್ಲಿ ಒಡೆಯುವಂಥ ಕೆಲಸ ಮಾಡಬೇಡಿ. ಈ ಮಾತನ್ನು ಹಿಂದೆಯೂ ಹೇಳಿದ್ದೆ, ಈಗಲೂ ಅದನ್ನೇ ಹೇಳುತ್ತಿದ್ದೇನೆ. ಮನೆ ಒಡೆಯುವಂತಹ ಕೆಲಸ ಯಾರೂ ಮಾಡಬಾರದು” ಎಂದರು.

“ಎಲ್ಲರೂ ಸೇರಿ ಸ್ವತಂತ್ರ ಧರ್ಮದ ಬಗ್ಗೆ ಹೋರಾಟ ಮಾಡಲು ವೀರಶೈವ ಮಹಾಸಭಾ ಲೀಡ್ ತೆಗೆದುಕೊಳ್ಳಬೇಕೆಂದು ನಾನು ಹೇಳಿದ್ದೆ. ಕಾರಣ ಸಮಾಜದಲ್ಲಿ ಒಡಕು ಉಂಟಾಗುವುದು ಬೇಡ. ಸಮಾಜವನ್ನು ಒಡೆವ ಕೆಲಸ ಬೇಡ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ವೀರಶೈವ ಲಿಂಗಾಯತ ಪ್ರತ್ಯೇಕ ಮಾಡಲು ಹೊರಟಿದ್ದಕ್ಕೆ ನಾನೂ ವಿರೋಧ ಮಾಡಿದ್ದೆ. ಯಾವುದೇ ಕಾರಣಕ್ಕೂ ಸಮಾಜವನ್ನು ಒಡೆಯುವ ಪ್ರಶ್ನೆಯೇ ಇಲ್ಲ. ನಿನ್ನೆಯ ದಾವಣಗೆರೆ ಸಮಾವೇಶದಲ್ಲಿ ಕೆಲ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು ಅದರಂತೆ ವೀರಶೈವ ಲಿಂಗಾಯತರ ಬೇಡಿಕೆಗಳಿಗಾಗಿ ಒಗ್ಗಟ್ಟು ಪ್ರದರ್ಶಿಸಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಸಚಿವ ಶಿವಾನಂದ ಪಾಟೀಲ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿ, “ಯಾರೋ ಒಬ್ಬರು ನೀಡಿದ ಹೇಳಿಕೆಗೆ ನಾನು ಪ್ರತಿಕ್ರಿಯಿಸಲ್ಲ. ಅದನ್ನು ಅವರೇ ಹೇಳಲಿ” ಎಂದರು.

“ಹಿಜಾಬ್ ಕುರಿತ ಹೇಳಿಕೆಗೆ ಸಿಎಂ ಸಿದ್ದರಾಮಯ್ಯ ಅವರೇ ಸ್ಪಷ್ಟನೆ ನೀಡಿದ್ದಾರೆ. ಅದನ್ನೇ ಪ್ರತಿಪಕ್ಷಗಳು ಬೇಕಿದ್ದರೆ ಅಸ್ತ್ರವನ್ನಾಗಿ ಮಾಡಿಕೊಳ್ಳಲಿ. ಅದಕ್ಕೆ ನಾನು ಜವಾಬ್ದಾರನಲ್ಲ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಕದನ | ಸಂಘರ್ಷ ಪೀಡಿತ ಮಣಿಪುರದಲ್ಲಿ ಬಿಜೆಪಿ ಸ್ಥಿತಿ ಏನಾಗಿದೆ?

ಮಣಿಪುರದಲ್ಲಿ ಬಿಜೆಪಿ ಕಳೆದೆರಡು ಚುನಾವಣೆಯಲ್ಲೂ ಮತಪ್ರಮಾಣದಲ್ಲಿ ಏರಿಕೆ ಕಂಡಿದ್ದರೂ ಈ ಬಾರಿ...

‘ಈಸ್ಟರ್ ಭಾನುವಾರ’ ಕೆಲಸದ ದಿನವೆಂದು ಘೋಷಣೆ; ಮಣಿಪುರ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ

ಕ್ರೈಸ್ತರ ಪ್ರಮುಖ ಹಬ್ಬವಾದ 'ಈಸ್ಟರ್ ಭಾನುವಾರ'ವನ್ನು (ಮಾರ್ಚ್‌ 31) ಕೆಲಸದ ದಿನವಾಗಿ...

ತಮಿಳುನಾಡು | 238 ಬಾರಿ ಚುನಾವಣೆಯಲ್ಲಿ ಸೋತರೂ ದಣಿಯದ ಪದ್ಮರಾಜನ್;‌ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ

ಚುನಾವಣೆಯಲ್ಲಿ ಸ್ಪರ್ಧಿಸಿ ಸೋತರೆ ಯಾರಿಗಾದರೂ ನಿರಾಶೆ ಉಂಟಾಗಬಹುದು. ಆದರೆ ಟೈರ್ ರಿಪೇರಿ...

ತೆರಿಗೆ ಮರು ಮೌಲ್ಯಮಾಪನ ವಿರುದ್ಧದ ಕಾಂಗ್ರೆಸ್ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ತೆರಿಗೆ ಅಧಿಕಾರಿಗಳು ತಮ್ಮ ವಿರುದ್ಧ ನಾಲ್ಕು ವರ್ಷಗಳ ಅವಧಿಯ ತೆರಿಗೆ ಮರುಮೌಲ್ಯಮಾಪನ...