ಕುಮಾರಸ್ವಾಮಿ ದತ್ತಮಾಲೆ ಹೇಳಿಕೆಗೆ ಚಪ್ಪಾಳೆ ತಟ್ಟಿದ ವಿಎಚ್‌ಪಿ

Date:

ಸಂದರ್ಭ ಬಂದರೆ ದತ್ತಮಾಲೆಯನ್ನೂ ಹಾಕುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಭಾನುವಾರ ಚಿಕ್ಕಮಗಳೂರಿನಲ್ಲಿ ಹೇಳಿದ್ದಾರೆ. ಅವರ ಹೇಳಿಕೆಯನ್ನು ವಿಶ್ವ ಹಿಂದು ಪರಿಷತ್ ಸ್ವಾಗತಿಸಿದೆ. ದತ್ತಮಾಲೆ ಧರಿಸುವ ನಿರ್ಧಾರ ಸ್ವಾಗತಾರ್ಹ ಎಂದಿದೆ.

ಪಕ್ಷದ ಹೆಸರಿನಲ್ಲಿಯೇ ‘ಜಾತ್ಯತೀತ’ತೆ ಇಟ್ಟುಕೊಂಡಿದ್ದ ಕುಮಾರಸ್ವಾಮಿ ಅವರು ಇದೀಗ ಹಿಂದುತ್ವವಾದ ಅಥವಾ ಧರ್ಮ ರಾಜಕಾರಣದ ಸೋಗು ಹಾಕಿಕೊಳ್ಳುತ್ತಿದ್ದಾರೆ. ಬಿಜೆಪಿ ಮತ್ತು ಬಲಪಂಥೀಯ ವಾದವನ್ನು ವಿರೋಧಿಸುತ್ತಿದ್ದ ಅವರು, ಈಗ ಬಿಜೆಪಿಯೊಂದಿಗೆ ಕೈ ಜೋಡಿದ್ದಾರೆ. ಬಲಪಂಥೀಯ ವಾದವನ್ನು ಬೆಂಬಲಿಸುತ್ತಿದ್ದಾರೆ. ಅಲ್ಲದೆ, ಚಿಕ್ಕಮಗಳೂರಿನ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲೆಯನ್ನೂ ಹಾಕಿಕೊಳ್ಳುತ್ತೇನೆ ಎಂದೂ ಹೇಳಿದ್ದಾರೆ.

ಅವರ ಹೇಳಿಕೆಯನ್ನು ಸ್ವಾಗತಿಸಿರುವ ವಿಎಚ್‌ಪಿ ಮುಖಂಡ ರಘು, “ಕುಮಾರಸ್ವಾಮಿ ಅವರು ದತ್ತಮಾಲೆ ಧರಿಸಲು ನಿರ್ಧರಿಸುವುದು ಸ್ವಾಗತಾರ್ಹ. ನಿಮ್ಮ ರಾಜಕೀಯ ಭವಿಷ್ಯ ಬದಲಾಗಲಿದ್ದು, ಇನ್ನಷ್ಟು ಶಕ್ತಿ ನೀಡಲಿ ಎಂದು ದತ್ತಾತ್ರೇಯ ಸ್ವಾಮಿಯಲ್ಲಿ ಬೇಡುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಧರ್ಮವನ್ನು ಮೀರಿ ಹಿಂದು-ಮುಸ್ಲಿಮರು ಒಟ್ಟಿಗೆ ಪೂಜಿಸುವ ಬಾಬಾ ಬುಡನ್‌ಗಿರಿಯನ್ನು ದತ್ತಪೀಠ ಮಾಡಲು ಹಿಂದುತ್ವವಾದಿ ಕೋಮು ಸಂಘಟನೆಗಳು ಹವಣಿಸುತ್ತಿವೆ. ಹಲವಾರು ವರ್ಷಗಳಿಂದ ಬಾಬಾ ಬುಡನ್‌ಗಿರಿ ವಿಚಾರ ವಿವಾದದಲ್ಲಿದೆ. ಈ ನಡುವೆ, ಡಿಸೆಂಬರ್ 17 ರಿಂದ 26ರವರೆಗೆ ಬಾಬಾ ಬುಡನ್‌ಗಿರಿಯಲ್ಲಿ ದತ್ತಮಾಲಾ ಅಭಿಯಾನವನ್ನು ಹಿಂದುತ್ವಾವಾದಿ ಕೋಮು ಸಂಘಟನೆಗಳು ಆಯೋಜಿಸಿವೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

’70 ಕೋಟಿ ಭಾರತೀಯರಿಗಿಂತ ಅಧಿಕ ಸಂಪತ್ತು 21 ಬಿಲಿಯನೇರ್‌ಗಳಲ್ಲಿದೆ ಅನ್ನೋದನ್ನ ಮೋದಿ ಹೇಳಲ್ಲ’

ದ್ವೇ‍ಷ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ನೇತೃತ್ವದ...

ದಾವಣಗೆರೆ | ಸ್ಲಂ ಜನರ ಮತ ಜಾಗೃತಿ ಸಮಾವೇಶ; ಸ್ಲಂ ಜನರ ಪ್ರಣಾಳಿಕೆ-2024 ಬಿಡುಗಡೆ

ದೇಶದ ರಕ್ಷಣೆ, ಸಾರ್ವಭೌಮತ್ವದ ಸಂವಿಧಾನದ ರಕ್ಷಣೆ ಮಾಡುವ ಅಭ್ಯರ್ಥಿಗೆ ನಾವು ಮತ...

ರಾಯಚೂರು | ಏಮ್ಸ್ ಮಂಜೂರು ಮಾಡದಿದ್ದರೆ ಚುನಾವಣೆ ಬಹಿಷ್ಕಾರ; ಎಚ್ಚರಿಕೆ

ಕಳೆದ ಎರಡು ವರ್ಷಗಳಿಂದ ಏಮ್ಸ್ ಮಂಜೂರಾತಿಗೆ ಸತತ ಹೋರಾಟ ನಡೆಸುತ್ತಿದ್ದರೂ ಕೇಂದ್ರ...

ವಿಜಯಪುರ | ಲೋಕಸಭಾ ಚುನಾವಣೆ – ಭಾವನೆ ಕೆರಳಿಸುವ v/s ಬದುಕು ರೂಪಿಸುವ ಸಂಘರ್ಷ: ಸಚಿವ ಎಚ್.ಕೆ ಪಾಟೀಲ್‌

ಭಾವನೆ ಕೆರಳಿಸುವ ಹಾಗೂ ಬದುಕು ರೂಪಿಸುವ ನಡುವಿನ ಸಂಘರ್ಷದ ಲೋಕಸಭೆ ಚುನಾವಣೆ...