ಪರಿಷತ್ ಉಪಚುನಾವಣೆ: ಬಿಜೆಪಿ ಬಂಡಾಯ ಅಭ್ಯರ್ಥಿ ನಾಮಪತ್ರ ವಾಪಸ್‌

Date:

ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‌ ಸ್ಥಾನಕ್ಕೆ ಫೆಬ್ರವರಿ 16ರಂದು ಉಪಚುನಾವಣೆ ನಡೆಯಲಿದೆ. ಚುನಾವಣೆಗೆ ಬಿಜೆಪಿ ವಿರುದ್ಧ ಬಂಡಾಯವೆದ್ದು, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಾರಾಯಣಸ್ವಾಮಿ ಅವರು ತಮ್ಮ ನಾಮಪತ್ರ ಹಿಂಪಡೆಯಲು ನಿರ್ಧರಿಸಿದ್ದಾರೆ. ಇದರಿಂದಾಗಿ, ಜೆಡಿಎಸ್‌ಗೆ ಮತ್ತಷ್ಟು ಬಲ ಬಂದಂತಾಗಿದೆ.

ಕಳೆದ ವಿಧಾನಸಭಾ ಚುನಾವಣೆ ಸಮಯದಲ್ಲಿ ಪುಟ್ಟಣ್ಣ ಅವರು ಜೆಡಿಎಸ್‌ ತೊರೆದು, ಕಾಂಗ್ರೆಸ್‌ ಸೇರಿದ್ದರು. ಆ ವೇಳೆ, ಅವರು ವಿಧಾನ ಪರಿಷತ್‌ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಕಾಂಗ್ರೆಸ್‌ನಿಂದ ಚುನಾವಣೆಗೆ ಸ್ಪರ್ಧಿಸಿ ಸೋಲುಂಡಿದ್ದರು. ಇದೀಗ, ವಿಧಾನ ಪರಿಷತ್ ಉಪಚುನಾವಣೆಗೆ ಅವರು ಕಾಂಗ್ರೆಸ್‌ನಿಂದ ಅಭ್ಯರ್ಥಿಯಾಗಿದ್ದಾರೆ.

ನಾರಾಯಣಸ್ವಾಮಿ ಅವರು ಬಿಜೆಪಿ ಟಿಕೆಟ್‌ ಆಕಾಂಕ್ಷಿಯಾಗಿದ್ದರು. ಆದರೆ, ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡಿರುವ ಕಾರಣ, ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸದೆ, ಜೆಡಿಎಸ್‌ ಅಭ್ಯರ್ಥಿ ರಂಗನಾಥ್ ಅವರಿಗೆ ಬೆಂಬಲ ನೀಡಿದೆ. ಹೀಗಾಗಿ, ಬಿಜೆಪಿ ವಿರುದ್ಧ ಸಿಟ್ಟಾಗಿದ್ದ ನಾರಾಯಣಸ್ವಾಮಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಆದರೆ, ಇದೀಗ, ತಮ್ಮ ನಾಮಪತ್ರವನ್ನು ಹಿಂಪಡೆಯಲು ನಿರ್ಧರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಿಜೆಪಿ ನಾಯಕರು ನಾರಾಯಣಸ್ವಾಮಿ ಅವರ ಮನವೊಲಿಸಿದ್ದಾರೆ. ನಾಯಕರ ಮನವಿಗೆ ಮಣಿದಿರುವ ನಾರಾಯಣಸ್ವಾಮಿ, ನಾಮಪತ್ರ ಹಿಂಪಡೆಯುವುದಾಗಿ ಘೋಷಿಸಿದ್ದಾರೆಂದು ಹೇಳಲಾಗಿದೆ.

ನಾಮಪತ್ರ ಹಿಂಪಡೆಯುವ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ನಾರಾಯಣಸ್ವಾಮಿ, “ಪಕ್ಷದ ನಿರ್ಧಾರಕ್ಕೆ ಬದ್ಧನಾಗಿ ನಾಮಪತ್ರ ಹಿಂಪಡೆಯುತ್ತಿದ್ದೇನೆ. 30 ವರ್ಷಗಳಿಂದ ಬಿಜೆಪಿಯಲ್ಲಿ ಕೆಲಸ ಮಾಡಿದ್ದೇನೆ. ಜೆಡಿಎಸ್‌ನ ರಂಗನಾಥ್‌ಗೆ ಬೆಂಬಲ ನೀಡುತ್ತೇನೆ. ಯಾವುದೇ ಕಾರಣಕ್ಕೂ ಪುಟ್ಟಣ್ಣ ಗೆಲ್ಲಲು ಬಿಡುವುದಿಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಧೀರಜ್ ಕಾಂಗ್ರೆಸ್‌ ಸೇರುವ ಸಾಧ್ಯತೆ!

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯ ಕಣವಾಗಿದೆ. ಸಿದ್ದರಾಮಯ್ಯ...

ಬಿಜೆಪಿ ಜೊತೆ ಮೈತ್ರಿಗೆ ವಿರೋಧ: ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ನಜ್ಮಾ ನಝೀರ್

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವುದಕ್ಕೆ...

ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ | ದೇವೇಗೌಡರ ಆಶೀರ್ವಾದ ಆನೆ ಬಲ ತಂದಿದೆ: ಬಿ ವೈ ವಿಜಯೇಂದ್ರ

ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಲನದಿಂದ ರಾಜ್ಯದ ರಾಜಕೀಯ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ...

ಯುದ್ಧದಲ್ಲಿ ಹೋರಾಡಲು ಭಾರತೀಯ ಕಾರ್ಮಿಕರಿಗೆ ರಷ್ಯಾ ಒತ್ತಾಯ; ಪ್ರಧಾನಿ ಮೋದಿ ಮೌನವೇಕೆ?

ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ಜಾಹೀರಾತು ವಿಡಿಯೋದಲ್ಲಿ ವಿದ್ಯಾರ್ಥಿಯೊಬ್ಬಳು, ‘ಯುದ್ಧ ಪೀಡಿತ...