ವಿಜಯನಗರ | ಅಕ್ರಮ ಮದ್ಯ ಮಾರಾಟ ತಡೆಗೆ ಆಗ್ರಹ

Date:

ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿ ವಿಜಯನಗರ ಜಿಲ್ಲಾಧಿಕಾರಿಗೆ ಮದ್ಯ ನಿಷೇಧ ಆಂದೋಲನದ ಕಾರ್ಯಕರ್ತರು ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.

ಸುಮಾರು ಏಳು ವರ್ಷಗಳಿಂದ ಸಕ್ರಿಯವಾಗಿ ಮದ್ಯ ನಿಷೇಧ ಆಂದೋಲನ ವತಿಯಿಂದ ಹೋರಾಟ ನಡೆಸುತ್ತಿದ್ದೇವೆ. ಆದರೂ ಕೂಡ ಯಾವುದೇ ಪ್ರಯೋಜನವಾಗಿಲ್ಲ. ಬದಲಾಗಿ ಅಕ್ರಮ ಮದ್ಯದ ದಂಧೆ ಹೆಮ್ಮರವಾಗಿ ಬೆಳೆಯುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಮದ್ಯ ನಿಷೇಧ ಆಂದೋಲನ ಜಿಲ್ಲಾ ಮುಖಂಡೆ ತ್ರಿವೇಣಿ ಬನ್ನಿಕಲ್ಲು ಈ ದಿನ.ಕಾಮ್ ಜೊತೆ ಮಾತನಾಡಿ “ನಾವು 2015ರಿಂದ ಮದ್ಯ ನಿಷೇಧ ಕುರಿತು ಹೋರಾಟ ಮಾಡುತ್ತಾ ಬಂದಿದ್ದೇವೆ. ಹಲವು ಅಧಿಕಾರಿಗಳಿಗೆ ಮನವಿ ಪತ್ರಗಳನ್ನೂ ಸಲ್ಲಿಸಿದ್ದೇವೆ. ಆದರೆ, ಈವರೆಗೆ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ” ಎಂದು ಆರೋಪಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಕರ್ನಾಟಕದ ಹಳ್ಳಿಗಳಲ್ಲಿ ಅಕ್ರಮ ಮದ್ಯದ ಅಂಗಡಿಗಳು ಮಹಿಳೆಯರಿಗೆ ದೊಡ್ಡ ಸಮಸ್ಯೆಯನ್ನು ಉಂಟುಮಾಡುತ್ತಿವೆ. ಸಣ್ಣ ಪುಟ್ಟ ಊರುಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದರಿಂದ 8ನೇ ತರಗತಿಯ ಚಿಕ್ಕ ಮಕ್ಕಳೂ ಸಹ ಮದ್ಯ ಕುಡಿಯಲು ಪ್ರಾರಂಭಿಸಿದ್ದಾರೆ. ಅಕ್ರಮ ಮಾರಾಟವಿರುವ ಗ್ರಾಮಗಳ ಪಟ್ಟಿಯನ್ನು ಜಿಲ್ಲಾಧಿಕಾರಿ ಕಚೇರಿಗೆ ಹಾಗೂ ಜಿಲ್ಲಾ ಅಬಕಾರಿ ಇಲಾಖೆಗೆ ಹಲವು ಬಾರಿ ಸಲ್ಲಿಸಿದ್ದು, ಮನವಿ ಮಾಡಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಯವರು ಈಗಲಾದರೂ ಗ್ರಾಮಗಳಿಗೆ ಭೇಟಿ ನೀಡಿ ತನಿಖೆ ನಡೆಸಿ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ತಹಶೀಲ್ದಾರ್‌ ಕಚೇರಿಯಲ್ಲಿ ಲಂಚ ಆರೋಪ; ಆದರ್ಶ ಗ್ರಾಮ ಸಮಿತಿ ಖಂಡನೆ

“ಅಕ್ರಮ ಮದ್ಯ ಮಾರಾಟ ತಡೆಗೆ ಸರಿಯಾಗಿ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ಗ್ರಾಮೀಣ ಕೂಲಿಕಾರರ ಸಂಘ ತಾಲೂಕು ಸಂಚಾಲಕಿ ಶೈನಾಜ, ಹರಪ್ಪನಹಳ್ಳಿ ತಾಲೂಕು ಕಾರ್ಯಕರ್ತೆ ಭಾಗ್ಯ ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಚಿತ್ರದುರ್ಗ | ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಸಾವು

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಮಹಿಳಾ...

ಶಿವಮೊಗ್ಗ | ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ; ತಿಮ್ಲಾಪುರದ ಮಹಿಳೆಯರು ಸಂತಸ

"ಬಂಗಾರಪ್ಪನವರು ನಮ್ಮ ಮನೆಯ ನಂದಾದೀಪ" ಯಾವ ಸರ್ಕಾರ ಏನೇ ಮಾಡಿದರೂ 32...

ಕೋಲಾರ | ಮೂಲಭೂತ ಸೌಕರ್ಯ ಕೊರತೆ : ಮತದಾನ ಬಹಿಷ್ಕರಿಸಿದ ಗ್ರಾಮಸ್ಥರು

ದೇಶದಲ್ಲಿ ಎರಡನೇ ಹಂತದ ಮತದಾನ ನಡೆಯುತ್ತಿದ್ದರೇ, ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...