ವಿಜಯಪುರ | ʼಭಾರತ ಪ್ರಜಾಪ್ರಭುತ್ವ ವ್ಯವಸ್ಥೆ, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಸಂವಿಧಾನದಿಂದʼ

Date:

ಭಾರತವು ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವುದು, ಮೂಲಭೂತ ಹಕ್ಕುಗಳನ್ನು ಹೊಂದಿರುವುದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದ ಮೂಲಕ ಮಾತ್ರ ಎಂದು ಶಾಸಕ ನಾಡಗೌಡ್ ಹೇಳಿದರು.

ತಾಳಿಕೋಟಿ ಪಟ್ಟಣದಲ್ಲಿ ಕಂದಾಯ ಇಲಾಖೆ ಹಾಗು ತಾಲೂಕ ಪಂಚಾಯಿತಿ, ಪುರಸಭೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಆರಕ್ಷಕ ಪಡೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಚರಿಸಲಾದ 75ನೇ ಗಣರಾಜ್ಯೋತ್ಸವದಲ್ಲಿ ಅವರು ಮಾತನಾಡಿದರು.

ಶಾಸಕ ಸಿ.ಎಸ್. ನಾಡಗೌಡ ಮತ್ತು ಮುದ್ದೇಬಿಹಾಳ ತಾಲೂಕು ವ್ಯಾಪ್ತಿಯ ಸಿಪಿಐ ತುಳಸಿಗೆರಿ, ತಹಸೀಲ್ದಾರರಾದ ಕೀರ್ತಿ ಚಾಲಕ್, ಪುರಸಭೆಯ ಪ್ರಧಾನ ಕಾರ್ಯದರ್ಶಿ ಮೋಹನ್ ಜಾದವ ಹಾಗೂ ತಾಲೂಕು ಆಡಳಿತದ ಎಲ್ಲಾ ಸಿಬ್ಬಂದಿ ಸೇರಿ ಧ್ವಜಾರೋಹಣ ನೆರವೇರಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಂತರ ಮಾತನಾಡಿದ ಶಾಸಕ ಸಿ.ಎಸ್. ನಾಡಗೌಡ, ಭಾರತವು ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವುದು ವಿಶೇಷ. ಇದು ನಮ್ಮ ಹೆಮ್ಮೆಯ ಭಾರತ. ನಮಗೆ ಸ್ವಾತಂತ್ರ್ಯ ತಂದುಕೊಟ್ಟ ನೇತಾಜಿ, ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದು ನಾವು ನಡೆಯುವುದು ಅತ್ಯಂತ ಮುಖ್ಯವಾದದ್ದು ಎಂದರು.

ನಮ್ಮ ದೇಶದಲ್ಲಿ ಸಾಕಷ್ಟು ಜಾತಿ ಧರ್ಮಗಳಿದ್ದರೂ ಕೂಡ ನಾವು ಒಂದೇ ಎಂಬ ಭಾವನೆಯಿಂದ ಬದುಕುತ್ತಿದ್ದೇವೆ. ಆದರೆ, ಈಗಿನ ಕೇಂದ್ರ ಸರ್ಕಾರವು ಜಾತಿ ಧರ್ಮಗಳ ಮಧ್ಯೆ ಕಂದಕವನ್ನುಂಟು ಮಾಡುವ ಕೆಲಸ ನಿರಂತರವಾಗಿ ನಡೆಯುತ್ತಿದೆ ಇದರ ವಿರುದ್ಧ ಜನರು ಧ್ವನಿ ಎತ್ತಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ತಾಳಿಕೋಟಿಯ ಮಾಜಿ ಸೈನಿಕರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾನವ ಬಂದತ ವೇದಿಕೆಯ ತಾಲೂಕು ಸಂಚಾಲಕ ಕಾಶಿನಾಥ್ ಕಟ್ಟಿಮನಿ, ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈ ಭೀಮ್ ಮುತ್ತಗಿ ಇದ್ದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಆಯೋಜಿಸಿದ್ದ ಭಾರತ ಸಂವಿಧಾನ ಕುರಿತ ಕ್ವೀಜ್ ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಯಿತು. ಅಂಜುಮನ್ ಕಾಲೇಜಿನ ವಿದ್ಯಾರ್ಥಿಗಳು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜೀವನದಕುರಿತು ನಾಟಕ ಮಾಡಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...