ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡ ವಿನೇಶ್ ಫೋಗಟ್

Date:

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ದೇಶದ ಖ್ಯಾತ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್, ಮುಂದಿನ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿಕೊಂಡಿದ್ದಾರೆ.

ಕಾಮನ್‌ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ಆಗಿರುವ  ವಿನೇಶ್ ಫೋಗಟ್ ಅವರು ಶನಿವಾರ ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯ ಸೆಮಿಫೈನಲ್‌ನಲ್ಲಿ ಕಝಾಕಿಸ್ತಾನದ ಪ್ರತಿಸ್ಪರ್ಧಿಯನ್ನು ಸೋಲಿಸುವ ಮೂಲಕ ಒಲಿಂಪಿಕ್ಸ್‌ಗೆ ಅರ್ಹತೆ ಗಳಿಸಿದ್ದಾರೆ.

ಕ್ವಾಲಿಫೈಯರ್‌ನ ಮಹಿಳೆಯರ 50 ಕೆಜಿ ವಿಭಾಗದ ಸೆಮಿಫೈನಲ್ ಪಂದ್ಯದಲ್ಲಿ ಕಝಾಕಿಸ್ತಾನದ ಲಾರಾ ಗ್ಯಾನಿಕಿಜಿ ಅವರನ್ನು 10-0 ಅಂತರದಿಂದ ಸೋಲಿಸುವ ಮೂಲಕ ಪ್ಯಾರಿಸ್ ಒಲಿಂಪಿಕ್ಸ್ 2024ಕ್ಕೆ ಅರ್ಹತೆ ಪಡೆದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ ಚಾಂಪಿಯನ್ ಫೋಗಟ್ ತಾಂತ್ರಿಕ ಶ್ರೇಷ್ಠತೆಯ ಮೂಲಕ ಕಝಕ್ ಕುಸ್ತಿಪಟು ವಿರುದ್ಧ 4:18 ನಿಮಿಷಗಳಲ್ಲಿ ಪಂದ್ಯವನ್ನು ಗೆದ್ದರು. ಇದಕ್ಕೂ ಮೊದಲು ನಡೆದಿದ್ದ ಪಂದ್ಯದಲ್ಲಿ ವಿನೇಶ್ ಫೋಗಟ್, ಕಾಂಬೋಡಿಯಾದ ಪ್ರತಿಸ್ಪರ್ಧಿ ಸ್ಮಾನಂಗ್ ಡಿಟ್ ಅನ್ನು ಸುಲಭವಾಗಿ ಸೋಲಿಸಿದ್ದರು.

ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ವಿನೇಶ್ ಫೋಗಟ್

ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳದ ಆರೋಪ ಹೊತ್ತಿದ್ದ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಸಿದ್ದ ಹೋರಾಟದಲ್ಲಿ ವಿನೇಶ್ ಫೋಗಟ್ ಮುಂಚೂಣಿಯಲ್ಲಿದ್ದರು.

ಬಜರಂಗ್ ಪುನಿಯಾ, ವಿನೇಶ್ ಫೋಗಟ್ ಮತ್ತು ಮಲಿಕ್ ಅವರ ಮೂವರು ಜನವರಿಯಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಹೋರಾಟ ಪ್ರಾರಂಭಿಸಿದ್ದರು. ಡಬ್ಲ್ಯುಎಫ್‌ಐನಲ್ಲಿ ಸಿಬ್ಬಂದಿ ಬದಲಾವಣೆ ಮಾಡಬೇಕೆಂದು ಪ್ರಬಲ ಹೋರಾಟ ನಡೆಸಿ, ಒತ್ತಾಯಿಸಿದ್ದರು. ಆದರೆ ಬಿಜೆಪಿ ಸಂಸದರ ನಿಕಟ ಸಹವರ್ತಿ, ಸಂಜಯ್ ಸಿಂಗ್ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಈಗ ಚುಕ್ಕಾಣಿ ಹಿಡಿದಿದ್ದಾರೆ.

‘ನನ್ನನ್ನು ಡೋಪಿಂಗ್ ಪ್ರಕರಣದಲ್ಲಿ ಸಿಲುಕಿಸಲು ಯತ್ನ ನಡೆದಿದೆ’ ಎಂದು ಆರೋಪಿಸಿದ್ದ ವಿನೇಶ್ ಪೊಗಾಟ್

ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಸಂಜಯ್ ಸಿಂಗ್ ಅವರು ಒಲಿಂಪಿಕ್ಸ್‌ನಲ್ಲಿ ಆಡುವುದನ್ನು ತಡೆಯಲು ಬಯಸುತ್ತಿದ್ದಾರೆ. ಅಲ್ಲದೆ ಅವರು ತನ್ನ ವಿರುದ್ಧ ಡೋಪಿಂಗ್ ಪಿತೂರಿ ಮಾಡುವ ಸಾಧ್ಯತೆಗಳಿವೆ ಎಂದು ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಪೊಗಾಟ್ ಗಂಭೀರ ಆರೋಪ ಮಾಡಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...