ರಾಜೀನಾಮೆ ನೀಡುತ್ತೀರಾ? ಎಂಬ ಪತ್ರಕರ್ತೆಯ ಪ್ರಶ್ನೆಗೆ ‘ಚುಪ್’ ಎಂದ ಬಿಜೆಪಿ ಸಂಸದ ಬ್ರಿಜ್ ಭೂಷಣ್

Date:

  • ಚಾರ್ಜ್ ಶೀಟ್‌ನಲ್ಲಿ ದೆಹಲಿ ಪೊಲೀಸರಿಂದ ಲೈಂಗಿಕ ಶೋಷಣೆಯ ಉಲ್ಲೇಖ
  • ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ ಎಂದ ದೆಹಲಿ ಮಹಿಳಾ ಆಯೋಗದ ಮುಖ್ಯಸ್ಥೆ

ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಮೇಲೆ ದೆಹಲಿ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದು, ಈ ಸಂಬಂಧ ನೀವು ಸಂಸದನ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ ಎಂಬ ಪ್ರಶ್ನೆ ಕೇಳಿದ ಪತ್ರಕರ್ತೆಗೆ ಸಿಟ್ಟಿನಿಂದ ‘ಚುಪ್’ ಎಂದು ಗದರಿಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಖಾಸಗಿ ಸುದ್ದಿ ವಾಹಿನಿ ‘ಟೈಮ್ಸ್‌ ನೌ’ ಪತ್ರಕರ್ತೆಯೋರ್ವರು ಬ್ರಿಜ್‌ ಭೂಷಣ್‌ ಅವರು ಎದುರಿಸುತ್ತಿರುವ ಗಂಭೀರ ಆರೋಪಗಳ ಬಗ್ಗೆ ಪ್ರಶ್ನೆ ಕೇಳಲು ಪ್ರಯತ್ನಿಸಿದರು.

ನೀವು ನಿಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ? ಎಂದು ಕೇಳಿದಾಗ, ಕೋಪಗೊಂಡ ಸಂಸದ, ‘ಯಾಕೆ ರಾಜೀನಾಮೆ ನೀಡಬೇಕು. ಯಾಕೆ ರಾಜೀನಾಮೆ ನೀಡಬೇಕೆಂದು ಕೇಳುತ್ತೀರಾ ನೀವು? ಚುಪ್” ಎಂದು ಹಿಂದಿಯಲ್ಲಿ ಕೋಪದಿಂದಲೇ ಪ್ರತಿಕ್ರಿಯಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಬಳಿಕ ಉತ್ತರವನ್ನು ಪಡೆಯಲು ವರದಿಗಾರ್ತಿ ಸಿಂಗ್ ಅವರನ್ನು ಅವರ ಕಾರಿನವರೆಗೆ ಹಿಂಬಾಲಿಸಿದರು. ಆದರೆ ಉತ್ತರ ನೀಡುವ ಬದಲು ಕಾರಿನ ಬಾಗಿಲನ್ನು ಹಾಕಲು ಪ್ರಯತ್ನಿಸಿದಾಗ, ಪತ್ರಕರ್ತೆಯ ಕೈಯಲ್ಲಿದ್ದ ಮೈಕ್ ಬಾಗಿಲಿಗೆ ಸಿಲುಕಿ, ಕೆಳಗೆ ಬಿತ್ತು. ಈ ಎಲ್ಲ ದೃಶ್ಯಗಳು ಕ್ಯಾಮರಾದಲ್ಲಿ ದಾಖಲಾಗಿದ್ದು, ಸಂಸದನ ವರ್ತನೆ ಸೋಷಿಯಲ್ ಮೀಡಿಯಾಗಳಲ್ಲಿ ಪರ-ವಿರೋಧ ಚರ್ಚೆಗೆ ಕಾರಣವಾಗಿದೆ.

ಈ ವಿಡಿಯೋವನ್ನು ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಅವರ ಸೊಕ್ಕು ನೋಡಿ. ಮಹಿಳಾ ಪತ್ರಕರ್ತೆಯೊಬ್ಬರು ಪ್ರಶ್ನೆಗಳನ್ನು ಕೇಳುತ್ತಿದ್ದಾಗ ಆಕೆಯನ್ನು ನಿಂದಿಸಿದ್ದಾರೆ.ನರೇಂದ್ರ ಮೋದಿಯವರೇ, ನಿಮ್ಮ ಸಂಸದರ ದುಷ್ಕೃತ್ಯಗಳ ಬಗ್ಗೆ ಎಷ್ಟು ದಿನ ಮೌನವಾಗಿರುತ್ತೀರಿ? ಎಂದು ಪ್ರಶ್ನಿಸಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್, ಬ್ರಿಜ್ ಭೂಷಣ್ ಸಿಂಗ್ ಒಬ್ಬ ಗೂಂಡಾ ಎಂದು ಕರೆದಿದ್ದಾರೆ.

ಕ್ಯಾಮರಾದ ಎದುರಿಗೇ ಮಹಿಳಾ ವರದಿಗಾರರೊಂದಿಗೆ ಈ ರೀತಿ ವರ್ತಿಸುವ ಧೈರ್ಯವಿರುವಾಗ, ಕ್ಯಾಮೆರಾದ ಇಲ್ಲದಿದ್ದ ಕಡೆ ಆತ ಮಹಿಳೆಯರೊಂದಿಗೆ ಹೇಗೆ ವರ್ತಿಸಿರಬಹುದು ಎಂಬುದನ್ನು ಊಹಿಸಿ. ಈ ವ್ಯಕ್ತಿ ಸಂಸತ್ತಿನಲ್ಲಿರಬೇಕಾದವನಲ್ಲ, ಜೈಲಿನಲ್ಲಿ ಇರಬೇಕಾದವನು ಎಂದು ಕಿಡಿಕಾರಿದ್ದಾರೆ.

ಭಾರತೀಯ ಕುಸ್ತಿ ಫೆಡರೇಶನ್‌ನ ಮಾಜಿ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ ಅವರ ವಿರುದ್ಧದ ಲೈಂಗಿಕ ಕಿರುಕುಳ ಪ್ರಕರಣದಲ್ಲಿ, ದೆಹಲಿ ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ಕ್ರೀಡಾಪಟುಗಳಿಗೆ ಕಿರುಕುಳ, ಲೈಂಗಿಕ ಕಿರುಕುಳ ನೀಡಿದ್ದು, ಈ ಕೃತ್ಯವನ್ನು ಶಿಕ್ಷಾರ್ಹ ಎಂದು ದೆಹಲಿ ಪೊಲೀಸರು ಪರಿಗಣಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾರ್ಖಂಡ್ | ಭೀಕರ ರೈಲು ಅಪಘಾತ: 12ಕ್ಕೂ ಹೆಚ್ಚು ಮಂದಿ ಮೇಲೆ ಹರಿದ ಎಕ್ಸ್‌ಪ್ರೆಸ್ ರೈಲು

ಜಾರ್ಖಂಡ್‌ನ ಜಮ್ತಾರಾದಲ್ಲಿ ಭೀಕರ ರೈಲು ಅವಘಡ ಸಂಭವಿಸಿರವುದಾಗಿ ವರದಿಯಾಗಿದೆ. ಜಮ್ತಾರಾದ ಕಲ್ಜಾರಿಯಾ...

ಗಗನಯಾತ್ರಿ ಪ್ರಶಾಂತ್ ನಾಯರ್ ನನ್ನ ಪತಿ: ಮದುವೆಯ ಗುಟ್ಟು ಬಿಟ್ಟುಕೊಟ್ಟ ಮಲಯಾಳಂ ನಟಿ ಲೀನಾ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಗಗನಯಾನ್‌ನ ಭಾಗವಾಗಿ ಕಕ್ಷೆಗೆ ಹಾರುವ ನಾಲ್ಕು...

ಲೋಕಪಾಲ್‌ ಮುಖ್ಯಸ್ಥರಾಗಿ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಎ ಎಂ ಖಾನ್ವಿಲ್ಕರ್ ನೇಮಕ

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ಅಜಯ್ ಮಾಣಿಕ್‌ ರಾವ್ ಖಾನ್ವಿಲ್ಕರ್ ಅವರನ್ನು...

ಉತ್ತರ ಪ್ರದೇಶ | ದೇಶದ ಹಿರಿಯ ಎಸ್‌ಪಿ ಸಂಸದ ಶಫೀಕುರ್ ರೆಹಮಾನ್ ಬರ್ಕ್ ನಿಧನ

ದೇಶದ ಹಿರಿಯ ಸಂಸದರಾಗಿದ್ದ ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಸಂಸದ ಶಫೀಕುರ್...