ಪುಟಿನ್ ಆರೋಗ್ಯದಲ್ಲಿ ಏರುಪೇರು; ಸ್ವಾಧೀನ ಕಳೆದುಕೊಳ್ಳುತ್ತಿರುವ ಕೈಕಾಲುಗಳು

Date:

  • 3 ವರ್ಷಗಳ ಕಾಲ ಪುಟಿನ್‌ ಬದುಕಬಹುದು ಎಂದು ಹೇಳಿದ್ದ ಎಫ್‌ಎಸ್‌ಬಿ
  • ಅನಾರೋಗ್ಯದ ವರದಿ ನೀಡಿ ವಿಶ್ರಾಂತಿಗೆ ಸಲಹೆ ನೀಡಿದ್ದ ವೈದ್ಯರು  

ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬಲಗೈ ಮತ್ತು ಬಲಗಾಲು ಭಾಗಶಃ ಸ್ವಾಧೀನ ಕಳೆದುಕೊಳ್ಳುವುದರ ಜೊತೆ ದೃಷ್ಟಿ ಕೂಡ ಮಂಜಾಗುತ್ತಿದೆ.

ಮಾಧ್ಯಮಗಳ ವರದಿ ಪ್ರಕಾರ, 70 ವರ್ಷದ ವ್ಲಾದಿಮಿರ್‌ ಪುಟಿನ್‌ ಕೈಕಾಲು ಸ್ವಾಧೀನ ಕಳೆದುಕೊಳ್ಳುವುದರೊಂದಿಗೆ ತೀವ್ರ ತಲೆ ನೋವು, ದೃಷ್ಟಿ ಮಂದವಾಗಿರುವುದು ಹಾಗೂ ನಾಲಿಗೆ ಮರಗಟ್ಟುವಿಕೆಯಿಂದಲೂ ಬಳಲುತ್ತಿದ್ದಾರೆ ಎಂದು ತಿಳಿಸಲಾಗಿದೆ.

ಕಳೆದ ವರ್ಷ ರಷ್ಯಾ – ಉಕ್ರೇನ್‌ ಯುದ್ಧ ಆರಂಭವಾದಾಗಿನಿಂದಲೂ ಪುಟಿನ್‌ ಅವರ ಅನಾರೋಗ್ಯದ ಬಗ್ಗೆ ಹಲವು ರೀತಿಯ ಊಹಾಪೋಹಗಳು ವರದಿಯಾಗುತ್ತಿತ್ತು. ಆದರೆ ಮಾಧ್ಯಮಗಳು ನೀಡಿರುವ ವರದಿ ಅದಕ್ಕೆ ಪುಷ್ಟಿ ನೀಡುವಂತಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಷ್ಯಾದ ಮಾಧ್ಯಮಗಳ ವರದಿ ಪ್ರಕಾರ, ಪುಟಿನ್‌ ಅವರು ಬಲಗೈ ಮತ್ತು ಬಲಗಾಲಿನ ಸಂವೇದನೆಯನ್ನು ಭಾಗಶಃ ಕಳೆದುಕೊಂಡಿದ್ದು, ವೈದ್ಯರು ಅವರನ್ನು ತುರ್ತು ಆರೈಕೆಗೆ ಸೂಚಿಸಿದ್ದಾರೆ ಎನ್ನಲಾಗಿದೆ.

ಕಳೆದ ವರ್ಷ ಉಕ್ರೇನ್‌ ವಿರುದ್ಧ ಯುದ್ಧ ಘೋಷಿಸಿದಾಗಿನಿಂದ ಪುಟಿನ್‌ ಆರೋಗ್ಯ ವಿಚಾರ ನಿರಂತರ ಚರ್ಚೆಯಲ್ಲಿದೆ. ಇದಕ್ಕೆ ಸಂಬಂಧಿಸಿದಂತೆ ಮತ್ತೊಂದು ವರದಿ ಬಿಡುಗಡೆಯಾಗಿದ್ದು, ಪುಟಿನ್‌ ಆರೋಗ್ಯ ಮತ್ತಷ್ಟು ಕ್ಷೀಣಿಸಿದೆ ಎಂದು ಹೇಳಲಾಗಿದೆ.

ಈ ಹಿಂದೆಯೇ ವೈದ್ಯರು ಸಮಾಲೋಚನೆ ಮಾಡಿ‌, ಔಷಧಿಯೊಂದಿಗೆ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಪುಟಿನ್‌ ವಿಶ್ರಾಂತಿ ಪಡೆಯಲು ನಿರಾಕರಿಸಿ, ಉಕ್ರೇನ್‌ ವಿರುದ್ಧದ ಯುದ್ಧದ ಬೆಳವಣಿಗೆಯಲ್ಲಿ ತೊಡಗಿಕೊಂಡರು.

ಪುಟಿನ್‌ ಕ್ಯಾನ್ಸರ್‌ ಮತ್ತು ಪಾರ್ಕಿನ್ಸನ್‌ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ರಷ್ಯಾದ ಬೇಹುಗಾರಿಕಾ ಸಂಸ್ಥೆ ಎಫ್‌ಎಸ್‌ಬಿ ಕಳೆದ ವರ್ಷವೇ ಹೇಳಿತ್ತು. ಅಲ್ಲದೇ ಹೆಚ್ಚೆಂದರೆ ಪುಟಿನ್‌ ಇನ್ನು 3 ವರ್ಷಗಳ ಕಾಲ ಬದುಕಬಹುದು ಎಂದು ತಿಳಿಸಿತ್ತು. ಆದರೆ ರಷ್ಯಾದ ಸಚಿವರು ಪುಟಿನ್‌ ಅನಾರೋಗ್ಯದ ವರದಿಯನ್ನು ನಿರಾಕರಿಸುತ್ತಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದುಬೈ ಪ್ರವಾಹ| ಭಾರೀ ಮಳೆ, ಬಿರುಗಾಳಿಯಿಂದ ಸಂಚಾರ ಅಸ್ತವ್ಯಸ್ತ; 28 ಭಾರತದ ವಿಮಾನಗಳು ರದ್ದು

ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು...

ಮರುಭೂಮಿ ದೇಶ ದುಬೈನಲ್ಲಿ ಭಾರೀ ಮಳೆಯಿಂದ ಪ್ರವಾಹ; ಒಮಾನ್​ನಲ್ಲಿ 18 ಮಂದಿ ಸಾವು

ಯುನೈಟೆಡ್ ಅರಬ್ ಎಮಿರೆಟ್ಸ್ (ಯುಎಇ)ನಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ದುಬೈ...

ಇರಾನ್ ವಶದಲ್ಲಿ ಇಸ್ರೇಲ್ ಹಡಗು: 17 ಸಿಬ್ಬಂದಿಗಳ ಭೇಟಿ ಮಾಡಲು ಭಾರತೀಯ ಅಧಿಕಾರಿಗಳಿಗೆ ಅನುಮತಿ

ಇರಾನ್‌ನ ಕಮಾಂಡೋಗಳು 17 ಭಾರತೀಯ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಇಸ್ರೇಲ್ ಮೂಲದ ಸರಕು...

ಪಾಕಿಸ್ತಾನ | ಸರಬ್ಜಿತ್ ಸಿಂಗ್ ಕೊಲೆಯ ಆರೋಪಿ ಅಮೀರ್ ಸರ್ಫರಾಜ್ ಗುಂಡಿಕ್ಕಿ ಹತ್ಯೆ

ಭಾರತದ ಸರಬ್ಜಿತ್ ಸಿಂಗ್‌ ಹತ್ಯೆಯ ಆರೋಪಿ ಪಾಕಿಸ್ತಾನದ ಭೂಗತ ಪಾತಕಿ ಅಮೀರ್‌...