ಡಿ.4ರಿಂದ 22ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Date:

2023ರ ಸಂಸತ್ತಿನ ಚಳಿಗಾಲದ ಅಧಿವೇಶನವು ಡಿಸೆಂಬರ್ 4 ರಿಂದ 22ರವರೆಗೆ ನಡೆಯಲಿದೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ, ‘2023ರ ಚಳಿಗಾಲದ ಅಧಿವೇಶನ ಡಿಸೆಂಬರ್ 4ರಿಂದ 22 ರವರೆಗೆ ನಡೆಯಲಿದೆ. ಒಟ್ಟು 19 ದಿನಗಳ‌ ಕಾಲ ನಡೆಯುವ ಸಂಸತ್ ಅಧಿವೇಶನದಲ್ಲಿ ದೇಶದ ಹಿತದೃಷ್ಟಿಯಿಂದ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಯಲಿದೆ’ ಎಂದು ತಿಳಿಸಿದ್ದಾರೆ.

ಸಂಸತ್ತಿನ ಚಳಿಗಾಲದ ಅಧಿವೇಶನ ಡಿಸೆಂಬರ್ 2ನೇ ವಾರದಲ್ಲಿ ಆರಂಭವಾಗಿ ಕೊನೆಯ ವಾರ ಮುಕ್ತಾಯವಾಗುವ ಸಾಧ್ಯತೆ ಇದೆ ಎಂದು ನಿನ್ನೆ ವರದಿಯಾಗಿತ್ತು. ಈ ಮಾಹಿತಿಯ ಬೆನ್ನಲ್ಲೇ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅಧಿಕೃತವಾಗಿ ಮಾಹಿತಿ ಹಂಚಿಕೊಂಡಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಡಿ.3ರಂದು ಪಂಚರಾಜ್ಯ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಚಳಿಗಾಲದ ಅಧಿವೇಶನ ಸಾಮಾನ್ಯವಾಗಿ ನವೆಂಬರ್ ಮೂರನೇ ವಾರದಲ್ಲಿ ಪ್ರಾರಂಭವಾಗಿ, ಡಿಸೆಂಬರ್ 25ಕ್ಕೆ ಮುಂಚಿತವಾಗಿ ಮುಕ್ತಾಯಗೊಳ್ಳುತ್ತಿತ್ತು.

ಐಪಿಸಿ, ಸಿಆರ್‌ಪಿಸಿ ಮತ್ತು ಸಾಕ್ಷ್ಯ ಕಾಯ್ದೆ ಕುರಿತ ವಿಧೇಯಕಗಳು ಮಂಡನೆಯಾಗಿ ಅನುಮೋದನೆಗೊಳ್ಳುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವಾಲಯದ ಸ್ಥಾಯಿ ಸಮಿತಿಯು ಇತ್ತೀಚೆಗೆ ಈ ವಿಧೇಯಕಗಳ ಕುರಿತಾದ ಕರಡು ವರದಿಯನ್ನು ಅನುಮೋದಿಸಿದೆ.

ಇನ್ನೊಂದೆಡೆ, ಮುಖ್ಯ ಚುನಾವಣಾ ಆಯುಕ್ತರು ಹಾಗೂ ಚುನಾವಣಾ ಆಯುಕ್ತರ ನೇಮಕ ಕುರಿತ ವಿಧೇಯಕಗಳು ಅನುಮೋದನೆಗೆ ಬಾಕಿ ಇದೆ. ಅದು ಚಳಿಗಾಲದ ಅಧಿವೇಶನದಲ್ಲಿ ಅನುಮೋದನೆಗೊಳ್ಳಲಿದೆಯೇ ಎಂದು ಕಾದುನೋಡಬೇಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೌಕಾಪಡೆಯ ನೂತನ ಮುಖ್ಯಸ್ಥರಾಗಿ ಡಿ ಕೆ ತ್ರಿಪಾಠಿ ನೇಮಕ

ಭಾರತದ ಮುಂದಿನ ನೌಕಾಪಡೆಯ ಮುಖ್ಯಸ್ಥರನ್ನಾಗಿ ಡಿ ಕೆ ತ್ರಿಪಾಠಿ ಅವರನ್ನು ಕೇಂದ್ರ...

ಲೋಕಸಭಾ ಚುನಾವಣೆ | 21 ರಾಜ್ಯಗಳ 102 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಇಂದು

ಲೋಕಸಭಾ ಚುನಾವಣೆ ಯ ಮೊದಲ ಹಂತದ ಮತದಾನ ಇಂದು ನಡೆಯಲಿದ್ದು, ದೇಶದ...

ಹಾಸನ ಲೋಕಸಭಾ ಕ್ಷೇತ್ರ | ಪ್ರಜ್ವಲ್ ಆರ್ಭಟದೆದುರು ಶ್ರೇಯಸ್ ಅನುಕಂಪ ಗೆಲ್ಲಬಹುದೇ?

ಹಾಸನ ರಾಜಕಾರಣದ ಶಕ್ತಿಕೇಂದ್ರ. ದೇವೇಗೌಡ, ರೇವಣ್ಣ, ಭವಾನಿ, ಬಾಲಕೃಷ್ಣ, ಪ್ರಜ್ವಲ್ ಹಾಗೂ...