ಯಾದಗಿರಿ | ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ

Date:

ಮನುಷ್ಯರ ಮಾನಸಿಕ ಒತ್ತಡ ನಿವಾರಣೆಗೆ ಕ್ರೀಡಾಕೂಟಗಳು ಹೆಚ್ಚಿನ ಸಹಕಾರಿ. ಸರ್ಕಾರಿ ನೌಕರರು ಕ್ರೀಡೆಯಲ್ಲಿ ಭಾಗವಹಿಸಿ ತಮ್ಮ ಆರೋಗ್ಯ ಉತ್ತಮ ಪಡಿಸಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬಿ ಸಲಹೆ ನೀಡಿದರು.

ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ, ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಕ್ರೀಡಾಕೂಟದಲ್ಲಿ ಎಲ್ಲರೂ ಕ್ರೀಡಾ ಮನೋಭಾವದಿಂದ ಭಾಗವಹಿಸಬೇಕು. ಸೋಲು-ಗೆಲುವು ಸಮಾನವಾಗಿ ಸ್ವೀಕರಿಸಬೇಕು” ಎಂದು ಸಲಹೆ ನೀಡಿದರು.

“ಕೆಲಸದ ವೇಳೆ ಒತ್ತಡದ ಸನ್ನಿವೇಶಗಳು ನಿರ್ಮಾಣವಾಗುತ್ತವೆ. ಒತ್ತಡದಿಂದ ಹೊರಬರಲು ಕ್ರೀಡೆಯಲ್ಲಿ ಭಾಗವಹಿಸಬೇಕು. ಈಗಾಗಲೇ ಲೋಕಸಭಾ ಚುನಾವಣೆ ಘೋಷಣೆಯಾದ ಕಾರಣ ಚುನಾವಣೆ ಕರ್ತವ್ಯಕ್ಕೆ ನೇಮಿಸಿದ ಸಿಬ್ಬಂದಿ ನಿಷ್ಠೆಯಿಂದ ಕೆಲಸ ನಿರ್ವಹಿಸಬೇಕು” ಎಂದು ಹೇಳಿದರು.

ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಪುರುಷ ನೌಕರರು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ಅಧ್ಯಕ್ಷ ಮಹಿಪಾಲರೆಡ್ಡಿ ಮಾಲಿಪಾಟೀಲ ಮಾತನಾಡಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಹಿರಿಯ ಹೋರಾಟಗಾರ ವಿಷ್ಣು ಸಭಾಹಿತ್ ನಿಧನ; ಎಐಡಿವೈಒ ಸಂತಾಪ

ಹೆಚ್ಚುವರಿ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಂಘದ ಕೋಶಾಧ್ಯಕ್ಷ ಯಾಮರೆಡ್ಡಿ, ಆರ್ ಎಂ ನಾಟೇಕರ್, ಬಸವರಾಜ ಯಡ್ಡಳ್ಳಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಬಾವಿಹಳ್ಳಿ, ರಾಯಪ್ಪಗೌಡ, ಸಂಜು ದರ್ಬಾರಿ, ಸಂತೋಷ ನಿರೆಟಿ, ಮಲ್ಲೇಶ, ವೆಂಕಟೇಶ ಎಂ ಹಿರೇನೂರ್, ಹಂಪೇಶ, ಗೋವಿಂದ ಮೂರ್ತಿ, ಕೃಷ್ಣಾರೆಡ್ಡಿ, ಅಶೋಕ ಕೆಂಭಾವಿ, ನಾರಾಯಣರಡ್ಡಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮತದಾನ ಮಾಡಲು ವಿಕಲಚೇತನರು, ಹಿರಿಯ ನಾಗರಿಕರಿಗೆ ಸೌಲಭ್ಯ

ರಾಜ್ಯದಲ್ಲಿ ಏಪ್ರಿಲ್ 26ರಂದು ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿದೆ. ಈ...

ಲೋಕಸಭಾ ಚುನಾವಣೆ; ಕರ್ತವ್ಯದಲ್ಲಿರುವ ಬಹುತೇಕ ನೌಕರರಿಗೆ ಸಿಗದ ಅಂಚೆ ಮತದಾನ

ಲೋಕಸಭಾ ಚುನಾವಣೆಯ ಕರ್ತವ್ಯಕ್ಕೆ ತೆರಳುವ ಬಹುತೇಕ ಸೇವಾ ಸಿಬ್ಬಂದಿಗಳು ಈ ಬಾರಿ...

ಹಾಸನ ಪೆನ್‌ಡ್ರೈವ್‌ ಪ್ರಕರಣ: ನಾಲ್ವರು ಸಂತ್ರಸ್ತೆಯರು ಆತ್ಮಹತ್ಯೆಗೆ ಯತ್ನ

ಹಾಸನದ ಪೆನ್‌ಡ್ರೈವ್‌ ಪ್ರಕರಣ ದಿನದಿಂದ ದಿನಕ್ಕೆ ಜಿಲ್ಲಾದ್ಯಂತ ಆತಂಕ ಹೆಚ್ಚಿಸ್ತಾ ಇದೆ....

ಬೆಂಗಳೂರು | ಲೋಕಸಭಾ ಚುನಾವಣೆ : ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಜಿಲ್ಲಾ ಚುನಾವಣಾಧಿಕಾರಿ

2024ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಹಿನ್ನೆಲೆ, ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್...