ಎರಡನೇ ಟೆಸ್ಟ್‌ | ಶತಕ ಸಿಡಿಸಿ ಮಿಂಚಿದ ಯುವ ಆಟಗಾರ ಯಶಸ್ವಿ ಜೈಸ್ವಾಲ್; ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ

Date:

ವಿಶಾಖಪಟ್ಟಣದ ಡಾ. ವೈ ಎಸ್ ರಾಜಶೇಖರ ರೆಡ್ಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ ಉತ್ತಮ ಮೊತ್ತದತ್ತ ದಾಪುಗಾಲಿಡುತ್ತಿದೆ.

ನಾಯಕ ರೋಹಿತ್ ಶರ್ಮಾ ಹಾಗೂ ಶುಭ್​ಮನ್ ಗಿಲ್ ವಿಕೆಟ್ ಕಳೆದುಕೊಂಡ ಬಳಿಕ ಶ್ರೇಯಸ್ ಅಯ್ಯರ್ ಜೊತೆಗೂಡಿ ಭರ್ಜರಿ ಬ್ಯಾಟಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಆಕರ್ಷಕ ಶತಕ ಸಿಡಿಸಿ ಮಿಂಚಿದ್ದಾರೆ. ಕೇವಲ 151 ಎಸೆತಗಳಲ್ಲಿ ಜೈಸ್ವಾಲ್ ಬ್ಯಾಟ್​ನಿಂದ ಶತಕ ಮೂಡಿಬಂತು. ಇದು ಅವರ ಎರಡನೇ ಅಂತಾರಾಷ್ಟ್ರೀಯ ಟೆಸ್ಟ್ ಶತಕವಾಗಿದೆ. ಜೈಸ್ವಾಲ್ ಬಾರಿಸಿದ ಎರಡನೇ ಟೆಸ್ಟ್ ಶತಕದ ನೆರವಿನಿಂದ ಟೀಂ ಇಂಡಿಯಾ, ಮೊದಲ ದಿನದಾಟದಲ್ಲೇ ಬೃಹತ್ ಮೊತ್ತದತ್ತ ದಾಪುಗಾಲಿಡುತ್ತಿದೆ.

ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಮೊದಲ ಪಂದ್ಯದಲ್ಲಿ ಸೋತು ಆಘಾತಕ್ಕೊಳಗಾಗಿದ್ದ ಟೀಂ ಇಂಡಿಯಾ, ಎರಡನೇ ಟೆಸ್ಟ್ ಪಂದ್ಯದಲ್ಲಿ ಎಚ್ಚರಿಕೆಯ ಆರಂಭ ಪಡೆಯಿತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಆರಂಭಿಕರಾದ ರೋಹಿತ್ ಶರ್ಮಾ ಹಾಗೂ ಯಶಸ್ವಿ ಜೈಸ್ವಾಲ್ 17.3 ಓವರ್‌ಗಳಲ್ಲಿ 40 ರನ್‌ಗಳ ಜತೆಯಾಟವಾಡಿದರು. ರಕ್ಷಣಾತ್ಮಕ ಆಡವಾಡಿದ ನಾಯಕ ರೋಹಿತ್ ಶರ್ಮಾ 41 ಎಸೆತಗಳನ್ನು ಎದುರಿಸಿ 14 ರನ್ ಗಳಿಸಿ, ಇಂಗ್ಲೆಂಡ್ ಪರ ಚೊಚ್ಚಲ ಟೆಸ್ಟ್ ಪಂದ್ಯವನ್ನಾಡುತ್ತಿರುವ ಶೋಯೆಬ್ ಬಶೀರ್‌ ಬೌಲಿಂಗ್‌ನಲ್ಲಿ ಓಲಿ ಪೋಪ್‌ಗೆ ಕ್ಯಾಚ್ ನೀಡುವ ಮೂಲಕ ವಿಕೆಟ್ ಒಪ್ಪಿಸಿದರು.

ರೋಹಿತ್ ಶರ್ಮಾ ವಿಕೆಟ್ ಪತನದ ಬಳಿಕ ಶುಭ್‌ಮನ್ ಗಿಲ್ ಜತೆಯಾದ ಯಶಸ್ವಿ ಜೈಸ್ವಾಲ್ ಆಕರ್ಷಕ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಆಸರೆಯಾದರು. ಮೊದಲ ದಿನದಿಂದಲೇ ತಿರುವು ಪಡೆಯುವ ಮುನ್ಸೂಚನೆ ನೀಡುತ್ತಿರುವ ಪಿಚ್‌ನಲ್ಲಿ ತಮ್ಮ ಬ್ಯಾಟಿಂಗ್ ಪ್ರತಿಭೆ ಅನಾವರಣ ಮಾಡಿರುವ ಜೈಸ್ವಾಲ್ ಟೆಸ್ಟ್ ವೃತ್ತಿಜೀವನದ ಎರಡನೇ ಟೆಸ್ಟ್ ಶತಕ ಸಿಡಿಸಿ ಸಂಭ್ರಮಿಸಿದರು.

ಇಂಗ್ಲೆಂಡ್ ಬೌಲಿಂಗ್ ಪಡೆಯ ಎದುರು ದಿಟ್ಟ ಪ್ರದರ್ಶನ ತೋರಿದ ಜೈಸ್ವಾಲ್ ಕೇವಲ 151 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ ಶತಕ ದಾಖಲಿಸುವಲ್ಲಿ ಯಶಸ್ವಿಯಾದರು. 94 ರನ್ ಗಳಿಸಿದ್ದಾಗ, ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ಪಡೆದು ಮಿಂಚಿದ್ದ ಟಾಮ್ ಹಾರ್ಟ್ಲಿ ಬೌಲಿಂಗ್‌ನಲ್ಲಿ ಭರ್ಜರಿ ಸಿಕ್ಸರ್ ಸಿಡಿಸಿ ಎರಡನೇ ಟೆಸ್ಟ್ ಶತಕ ಬಾರಿಸಿದರು.

ಸದ್ಯ ಚಹಾ ವಿರಾಮ ಮುಗಿದಿದ್ದು, ಟೀಮ್ ಇಂಡಿಯಾ 71 ಓವರ್‌ಗಳ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 249 ರನ್ ದಾಖಲಿಸಿದೆ. ಈವರೆಗೆ ಇಂಗ್ಲೆಂಡ್ ಪರ ಶೋಯೆಬ್ ಬಶೀರ್‌, ಆ್ಯಂಡರ್‌ಸರ್ ಹಾಗೂ ಟಾಮ್ ಹಾರ್ಟ್ಲಿ, ರೆಹಾನ್ ಅಹ್ಮದ್ ತಲಾ ಒಂದೊಂದು ವಿಕೆಟ್ ಪಡೆದುಕೊಂಡಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ | ರೋಚಕ ಹಣಾಹಣಿಯಲ್ಲಿ ಕೈಕೊಟ್ಟ ನಸೀಬು: ಕೆಕೆಆರ್‌ ವಿರುದ್ಧ ಆರ್‌ಸಿಬಿಗೆ 1 ರನ್‌ಗಳ ಸೋಲು

ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಇಂದು ನಡೆದ ಐಪಿಎಲ್ 36ನೇ ಪಂದ್ಯದಲ್ಲಿ ರಾಯಲ್...

ಟಿ20 ವಿಶ್ವಕಪ್ ಕ್ರಿಕೆಟ್‌ನಲ್ಲಿ ‘ಕೆಎಂಎಫ್’ ಪ್ರಯೋಜಕತ್ವ

ನಂದಿನಿ ಬ್ರಾಂಡ್‌ನೊಂದಿಗೆ ಡೇರಿ ಉದ್ಯಮಗಳಲ್ಲಿ ಎಲ್ಲಡೆ ಹೆಸರುವಾಸಿಯಾಗಿರುವ ಕರ್ನಾಟಕ ಹಾಲು ಒಕ್ಕೂಟ...

ಐಪಿಎಲ್ | ಹೈದರಾಬಾದ್ ನೀಡಿದ್ದ ಬೃಹತ್ ಗುರಿ ಮುಟ್ಟಲು ಎಡವಿದ ಡೆಲ್ಲಿ ಕ್ಯಾಪಿಟಲ್ಸ್‌: 67 ರನ್‌ಗಳ ಸೋಲು

ಇಂದು ಅರುಣ್​ ಜೇಟ್ಲಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹೈವೋಲ್ಟೇಜ್​ ಪಂದ್ಯದಲ್ಲಿ ಡೆಲ್ಲಿ...

ಮಹಿಳೆಯರ ಕುಸ್ತಿ | ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ರೀತಿಕಾ ಹೂಡಾ, ಅಂಶು ಮಲಿಕ್

ಕಝಕಿಸ್ತಾನದ ಬಿಸ್ಕೆಕ್‌ನಲ್ಲಿ ನಡೆದ ಏಷ್ಯನ್ ಒಲಿಂಪಿಕ್ಸ್‌ನ ಏಷ್ಯನ್ ಅರ್ಹತಾ ಸುತ್ತಿನ ಪಂದ್ಯಾವಳಿಯಲ್ಲಿ...