ಮೈಸೂರು | ಗೃಹಲಕ್ಷ್ಮಿ ಯೋಜನೆಯ ಸಮಸ್ಯೆ ಬಗ್ಗೆ ಸಿಎಂ ಗಮನಕ್ಕೆ ತಂದಿದ್ದೇನೆ: ಯತೀಂದ್ರ ಸಿದ್ದರಾಮಯ್ಯ

Date:

ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ನೊಂದಾಯಿಸಿಕೊಂಡಿರುವ ಎಲ್ಲ ಮಹಿಳೆಯರಿಗೆ ಯೋಜನೆಯ ಸೌಲಭ್ಯ ದೊರೆಯಲಿದೆ. ಸಣ್ಣಪುಟ್ಟ ಸಮಸ್ಯೆಗಳಿಂದ ರಾಜ್ಯದಲ್ಲಿ ಶೇ.20ರಷ್ಟು ಫಲಾನುಭವಿಗಳಿಗೆ ಸೌಲಭ್ಯ ದೊರೆತಿಲ್ಲ. ಸಮಸ್ಯೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಬಂಚಳ್ಳಿ ಹುಂಡಿ ಗ್ರಾಮದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗೃಹಲಕ್ಷ್ಮಿ ಯೋಜನೆಯ ಪಲಾನುಭವಿಗಳು ಸಮಸ್ಯೆಯ ಬಗ್ಗೆ ನನ್ನ ಗಮನಕ್ಕೆ ತಂದಿದ್ದಾರೆ. ಮುಖ್ಯಮಂತ್ರಿಗಳು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಕೂಡಲೇ ಸಮಸ್ಯೆಗಳನ್ನು ಬಗೆಹರಿಸುವುದಾಗಿ ಹೇಳಿದ್ದಾರೆ. ಆದ್ದರಿಂದ, ಯೋಜನೆಯ ಫಲಾನುಭವಿಗಳು ಆತಂಕ ಪಡುವ ಅಗತ್ಯವಿಲ್ಲ” ಎಂದು ಹೇಳಿದ್ದಾರೆ.

“ಗ್ರಾಮದಲ್ಲಿ ಅಂಗನವಾಡಿ ನಿರ್ಮಾಣ, ಒಳ ಚರಂಡಿ ಸಮಸ್ಯೆ, ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಹಲವು ಸಮಸ್ಯೆಗಳನ್ನು ಗಮನಿಸಿದ್ದೇನೆ. ಎಲ್ಲ ಸಮಸ್ಯೆಗಳನ್ನು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಹಂತ ಹಂತವಾಗಿ ಸರಿಪಡಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಜನಸ್ಪಂದನಾ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಬಿ ಎಂ ರಾಮು ತಗಡೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಸ್ವಾಮಿ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ವಿಜಯ್ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಾಗಮ್ಮ ಕೃಷಿ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷ ಬಿ ಬಸವಣ್ಣಉಪಾಧ್ಯಕ್ಷ ಬಿ ಶಿವಣ್ಣ ಮಾಜಿ ಉಪಾಧ್ಯಕ್ಷರಾದ ಬಿಪಿ ಮಹಾದೇವ ಲೀಲಾವತಿ ಮಹದೇವು ಗ್ರಾಮ ಪಂಚಾಯತಿ ಸದಸ್ಯರಾದ ಪ್ರಭು ಸಿದ್ದಮ್ಮ ಮಧುರ ಗ್ರಾಮದ ಮುಖಂಡರಾದ ಎಂ ಮಹದೇವ್ ಗುರುಶಾಂತು ಬಸವರಾಜು ಬಿ ಬಿ ಕುಮಾರ್ ತಾಲೂಕು ಸಿದ್ದರಾಮಯ್ಯ ಅಭಿಮಾನಿ ಬಳಗದ ಅಧ್ಯಕ್ಷ ಅಣ್ಣಯ್ಯ ಕಾರ್ಮಿಕ ಮುಖಂಡ ಪ್ರಕಾಶ್ ಮಲ್ಲೇಗೌಡ ಬಿಕೆ ಮಹಾದೇವ ಟಿ ಜೆ ಮಹದೇವು ದಲಿತ ಮುಖಂಡ ಸಿ ಆರ್ ಮಹದೇವ್ ಸ ಕಳ್ಳಿ ಬಸವರಾಜು ಕಾಂಗ್ರೆಸ್ ಯುವ ಮುಖಂಡ ಬಿ ಆರ್ ರಾಕೇಶ್ ತಾಲೂಕು ಪಂಚಾಯತಿ ಕಾರ್ಯನಿರ್ವಣ ಅಧಿಕಾರಿ ಜರಾಲ್ಡ್ ರಾಜೇಶ್ ಪಿಡಿಒ ಪ್ರಕಾಶ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...