ವಿಜಯಪುರ | ಗ್ರಾಮ ಪಂಚಾಯತಿ ಆಡಳಿತದಲ್ಲಿ ಜಿ.ಪಂ. ಸಿಇಒ ಹಸ್ತಕ್ಷೇಪ; ಆರೋಪ

Date:

ಗ್ರಾಮ ಪಂಚಾಯತಿ ಅಡಳಿತ ಮತ್ತು ಕ್ರಿಯಾ ಯೋಜನೆ ತಯಾರಿಸುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರ ಹಸ್ತಕ್ಷೇಪವನ್ನು ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರ ಮಹಾ ಒಕ್ಕೂಟವು ವಿಜಯಪುರ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

“ರಾಜ್ಯದ ವಿವಿಧ ಜಿಲ್ಲೆಗಳ ಗ್ರಾಮ ಪಂಚಾಯತಿಗಳಲ್ಲಿ ಮನರೇಗಾ ಕ್ರಿಯಾ ಯೋಜನೆ, 15ನೇ ಹಣಕಾಸಿಗೆ ಸಂಬಂಧಿತ ಯೋಜನೆ ಹಾಗೂ ಜನರ ಸಮಸ್ಯೆಗೆ ಅನುಗುಣವಾಗಿ ಕ್ರಿಯಾ ಯೋಜನೆಗಳನ್ನು ತಯಾರಿಸಲು ಪಂಚಾಯತ್ ರಾಜ್ ಕಾಯ್ದೆಯ ಸೆಕ್ಷನ್‌ 243ಜೆ ಹೇಳುತ್ತದೆ. ಕ್ರಿಯಾ ಯೋಜನೆಗಳನ್ನು ತಯಾರಿಸುವುದು ಗ್ರಾಮ ಪಂಚಾಯತಿಗಳ ಜವಬ್ದಾರಿಯಾಗಿದ್ದು, ಅದರ ಪೂರ್ಣ ಅಧಿಕಾರ ಗ್ರಾಮ ಪಂಚಾಯತಿಗಳಿಗೆ ಇದೆ ಎಮದು ಹೇಳಿದೆ. ಆದರೂ, ವಿಜಯಪುರ ಜಿಲ್ಲಾ ಪಂಚಾಯತಿ ಸಿಇಒ ಹಸ್ತಕ್ಷೇಪ ಮಾಡುತ್ತಿದ್ದಾರೆ” ಎಂದು ಒಕ್ಕೂಟದ ಸದಸ್ಯರು ಆರೋಪಿಸಿದ್ದಾರೆ.

“ಜಿಲ್ಲಾ ಪಂಚಾಯತಿ ಸಿಇಒ ಅಧಿಕಾರಿಶಾಹಿ ಧೋರಣೆಯನ್ನು ಅನುಸರಿಸುತ್ತಿದ್ದಾರೆ. ಪಿಡಿಒಗಳ ಮೇಲೆ ಒತ್ತಡ ಹೇರಿ, ಚುನಾಯಿತ ಪ್ರತಿನಿದಿಗಳನ್ನು ಗಣನೆಗೆ ತೆಗೆದುಕೊಳ್ಳದೆ ಕ್ರಿಯಾ ಯೋಜೆನೆಗಳನ್ನು ರಚಿಸುವಂತೆ ನಿರ್ದೇಶನ ನೀಡುತ್ತಿದ್ದಾರೆ. ಇದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಿಕ ವಿರೋಧಿ ನಡೆಯಾಗಿದೆ. ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರಿಗೆ ನ್ಯಾಯ ಒದಗಿಸಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ, ಒಕ್ಕೂಟದ ಇಸಾಕ ಎಚ್ ಪಠಾಣ್, ಪ್ರದೀಪ ಪಾಟೀಲ, ರಮೇಶ ಶರಣಪ್ಪ ಇಂಗಳಗಿ, ರಮೇಶ ಮಂಗಳೂರು, ಧರೆಯಪ್ಪ ಕಡಕೋಳ, ಭರಮಪ್ಪ ಚೌಧರಿ ನಿಡಗುಂದಿ ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಮುವಾದಿ ಮಾತನ್ನಾಡುವ ಪ್ರಧಾನಿ ದೇಶಕ್ಕೆ ಬೇಕೆ?: ಸಚಿವ ಎಂ.ಸಿ ಸುಧಾಕರ್

'ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಂಗಳಸೂತ್ರ ಕಸಿಯುತ್ತಾರೆ, ದೇಶದ ಸಂಪತ್ತು ಹೆಚ್ಚು ಮಕ್ಕಳನ್ನು...

ಶಿವಮೊಗ್ಗ | ಮೂಲಭೂತ ಸೌಕರ್ಯಗಳ ಕೊರತೆ; ಚುನಾವಣೆ ಬಹಿಷ್ಕರಿಸಲು ಮುಂದಾದ ಗ್ರಾಮಗಳು

ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು...

ಬೆಂ. ದಕ್ಷಿಣ ಲೋಕಸಭಾ ಕ್ಷೇತ್ರ | 16 ಕಡೆ ಶೋಧ ಕಾರ್ಯ: 22 ಕೆಜಿ ಚಿನ್ನ, 6 ಕೋಟಿ ಮೌಲ್ಯದ ವಜ್ರ ಪತ್ತೆ

ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕಳೆದ ಎರಡು ದಿನಗಳಿಂದ ಬೆಂಗಳೂರು ದಕ್ಷಿಣ...

ಶಿವಮೊಗ್ಗ | ಹದಿನೈದು ವರ್ಷ ಆಡಳಿತ; ನೆಟ್ವರ್ಕ್ ಸಮಸ್ಯೆ ನೀಗಿಸದ ಸಂಸದರು: ಶಾಸಕ ಬೇಳೂರು ಗೋಪಾಲಕೃಷ್ಣ

ಹಳ್ಳಿಗಾಡು ಪ್ರದೇಶಗಳಲ್ಲಿ ಮೊಬೈಲ್ ನೆಟ್ವರ್ಕ್ ಸಮಸ್ಯೆ ತಲೆ ದೂರಿದೆ. ಹದಿನೈದು ವರ್ಷದ...