₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

Date:

  • ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಫುಡ್ ಡೆಲಿವರಿ ಸಂಸ್ಥೆ ಝೊಮ್ಯಾಟೊ
  • ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳಲ್ಲಿ ನೋಟು ಹಿಂಪಡೆಯಲು ಆರ್‌ಬಿಐ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್ ₹2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ ಬಳಿಕ, ಝೊಮ್ಯಾಟೋಗೆ ಹೊಸ ತಲೆಬಿಸಿ ಶುರುವಾಗಿದೆ.

‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ದೇಶದ ಫುಡ್ ಡೆಲಿವರಿ ಸಂಸ್ಥೆಯಾಗಿರುವ ಝೊಮ್ಯಾಟೊ ಮಾಹಿತಿ ಹಂಚಿಕೊಂಡಿದೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಂಪನಿ, “ಕಳೆದ ಶುಕ್ರವಾರದಿಂದ ‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಶೇಕಡಾ 72%ರಷ್ಟು ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ಹೇಳಿಕೊಂಡಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿತ್ತು. ಆ ಬಳಿಕ ಈ ರೀತಿಯ ಬೆಳವಣಿಗೆಯಾಗಿದೆ.

₹2,000 ಮುಖಬೆಲೆಯ ನೋಟುಗಳನ್ನು ಸಾರ್ವಜನಿಕರು ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇಡಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಇತ್ತೀಚೆಗೆ ಹೊರಡಿಸಿದ್ದ ಪ್ರಕಟಣೆಯಲ್ಲಿ ದೇಶದ ನಾಗರಿಕರಿಗೆ ತಿಳಿಸಿತ್ತು.

ಆರ್‌ಬಿಐನ ನಿರ್ಧಾರದಿಂದಾಗಿ ಗ್ರಾಹಕರು ಆನ್‌ಲೈನ್ ಪೇಮೆಂಟ್ ಬದಲಾಗಿ ಹೆಚ್ಚಾಗಿ, ‘ಕ್ಯಾಶ್‌ ಆನ್‌ ಡೆಲಿವರಿ’ಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹಣ ನೀಡುವ ವೇಳೆ ತಮ್ಮಲ್ಲಿರುವ ₹2 ಸಾವಿರದ ನೋಟುಗಳನ್ನೇ ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಸೋಮವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ₹2,000 ನೋಟುಗಳಲ್ಲಿ ಹೆಚ್ಚಿನವು ಸೆಪ್ಟೆಂಬರ್ 30 ರ ಗಡುವಿನೊಳಗೆ ಹಿಂತಿರುಗುವ ನಿರೀಕ್ಷೆಯಿದೆ ಎಂದು ಹೇಳಿದರು. ತಕ್ಷಣವೇ ಜಾರಿಗೆ ಬರುವಂತೆ ₹ 2000 ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ .

ನವೆಂಬರ್ 2016 ರಲ್ಲಿ ಆರ್‌ಬಿಐ ಕಾಯಿದೆ, 1934 ರ ಸೆಕ್ಷನ್ 24 (1) ರ ಅಡಿಯಲ್ಲಿ ಹಳೆಯ ₹500 ಮತ್ತು ₹1000 ನೋಟುಗಳನ್ನು ಅಮಾನ್ಯಗೊಳಿಸಿತ್ತು. ಆ ಬಳಿಕ ಕೇಂದ್ರ ಸರ್ಕಾರವು ಹೊಸ ₹2000 ನೋಟನ್ನು ಪರಿಚಯಿಸಿತ್ತು. 2018-19ನೇ ಸಾಲಿನಲ್ಲಿ ₹2000 ನೋಟುಗಳ ಮುದ್ರಣವನ್ನು ಕೇಂದ್ರವು ಸ್ಥಗಿತಗೊಳಿಸಿತ್ತು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಜನರಿಗೆ ದೇವಸ್ಥಾನಗಳಲ್ಲಿ ಪ್ರವೇಶವಿಲ್ಲ; ನಾನು ಅಯೋಧ್ಯೆಗೆ ಹೋದರೆ ಸಹಿಸುವರೇ?: ಮಲ್ಲಿಕಾರ್ಜುನ ಖರ್ಗೆ

ದೇಶಾದ್ಯಂತ ಪರಿಶಿಷ್ಟ ಜಾತಿಗಳ (ಎಸ್‌ಸಿ) ಜನರು ಇನ್ನೂ ತಾರತಮ್ಯವನ್ನು ಎದುರಿಸುತ್ತಿದ್ದಾರೆ. ಪರಿಶಿಷ್ಠರಿಗೆ...

ಲೋಕಸಭಾ ಚುನಾವಣೆ | ಬಿಜೆಪಿ ಗೆಲುವಿಗೆ 13 ರಾಜ್ಯಗಳ ಸವಾಲು! ಆಕ್ಸಿಸ್ ಎಂಡಿ ಗುಪ್ತಾ ಹೇಳುವುದೇನು? 

ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ 400ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂಬ...

ರಾಹುಲ್ V/s ಪಿಣರಾಯಿ; ಕೇರಳದಲ್ಲಿ ಲೋಕಸಭಾ ಚುನಾವಣಾ ಅಬ್ಬರ

ಕೇರಳದಲ್ಲಿ ಏಪ್ರಿಲ್ 26ರಂದು ಮತದಾನ ನಡೆಯಲಿದೆ. ಮತದಾನಕ್ಕೆ ಒಂದು ವಾರವಷ್ಟೇ ಬಾಕಿ...