ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್‌ ಡೌನ್; ಟ್ವಿಟರ್‌ನಲ್ಲಿ ಬಳಕೆದಾರರ ಆಕ್ರೋಶ

Meta Image
  • ಟ್ವಿಟರ್‌ನಲ್ಲಿ #instagramdown ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಬಳಕೆದಾರರ ಆಕ್ರೋಶ
  • ಇದಕ್ಕೆ ಸಂಬಂಧಿಸಿದಂತೆ ಕಂಪನಿಯು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ

ಕಳೆದ 24 ಗಂಟೆಗಳಿಂದ ಮೆಟಾ ಮಾಲೀಕತ್ವದ ವೇದಿಕೆಗಳಾದ ಇನ್‌ಸ್ಟಾಗ್ರಾಮ್‌ ಮತ್ತು ಫೇಸ್‌ಬುಕ್‌ ಬಳಕೆದಾರರರು ಪ್ರಪಂಚದಾದ್ಯಂತ ಸಂದೇಶಗಳನ್ನು ಕಳುಹಿಸುವಲ್ಲಿ ಅಥವಾ ಸ್ವೀಕರಿಸುವಲ್ಲಿ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಸಂದೇಶ ಕಳುಹಿಸಿದ ತಕ್ಷಣ ಸ್ವಯಂಚಾಲಿತವಾಗಿ ಕಣ್ಮರೆಯಾಗುತ್ತಿದೆ ಎಂದು ಬಳಕೆದಾರರು ಟ್ವಿಟರ್‌ನಲ್ಲಿ #instagramdown ಎಂಬ ಹ್ಯಾಶ್‌ಟ್ಯಾಗ್‌ ಬಳಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಡೌನ್‌ಡಿಟೆಕ್ಟರ್‌ ಸಹ ಸಮಸ್ಯೆಯನ್ನು ಹಂಚಿಕೊಂಡಿದ್ದು, ಪ್ರಸ್ತುತ ಇನ್‌ಸ್ಟಾಗ್ರಾಮ್‌ ರೇಖಾನಕ್ಷೆಯಲ್ಲಿ ದೊಡ್ಡ ಜಿಗಿತ ತೋರಿಸುತ್ತಿದೆ. ವರದಿಯ ಪ್ರಕಾರ, ಪ್ರಪಂಚದಾದ್ಯಂತ ಬಳಕೆದಾರರು ಈ ಸಮಸ್ಯೆ ಎದುರಿಸುತ್ತಿದ್ದಾರೆ. ಅದಾಗ್ಯೂ, ಸುಮಾರು 40ರಷ್ಟು ಬಳಕೆದಾರರು ಇನ್‌ಸ್ಟಾಗ್ರಾಮ್‌ನಲ್ಲಿ ಲಾಗಿನ್ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಡೌನ್‌ಡಿಟೆಕ್ಟರ್‌ ವೆಬ್‌ಸೈಟ್‌ ವರದಿ ಮಾಡಿದೆ.

Instagram Image

ಈ ಸಮಸ್ಯೆಗೆ ಕಾರಣವೇನು?

ಪ್ರಸ್ತುತ ಸಿಕ್ಕಿರುವ ಮಾಹಿತಿ ಪ್ರಕಾರ ಬಳಕೆದಾರರು ಸಂದೇಶ ಕಳುಹಿಸುವುದು ಮತ್ತು ಸ್ವೀಕರಿಸುವುದರಲ್ಲಿ ಹಲವು ಸಮಸ್ಯೆ ಎದುರಿಸುತ್ತಿದ್ದಾರೆ. ರೀಲ್ಸ್‌, ಫೀಡ್, ಇತ್ಯಾದಿಗಳನ್ನು ಒಳಗೊಂಡಂತೆ ಅಪ್ಲಿಕೇಶನ್‌ನಲ್ಲಿ ಹಲವು ಫೀಚರ್‌ಗಳಲ್ಲಿ ಸಮಸ್ಯೆ ಕಂಡುಬಂದಿದೆ. ಸಂದೇಶಗಳು ಕಳುಹಿಸಿದ ನಂತರ ಸ್ವಯಂಚಾಲಿತವಾಗಿ ಕಣ್ಮರೆಯಾಗುತ್ತಿರುವುದು ಅಪ್ಲಿಕೇಶನ್‌ ಇನ್‌ಬಾಕ್ಸ್‌ ವಿಭಾಗದಲ್ಲಿ ಮಾತ್ರ ಎಂದು ತಿಳಿಸಲಾಗಿದೆ. 

ಇದಕ್ಕೆ ಸಂಬಂಧಿಸಿ ಕಂಪನಿಯು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಸಮಸ್ಯೆಯೂ ಪರಿಹಾರವಾಗಿಲ್ಲ ಎಂದು ಬಳಕೆದಾರರು ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app