ಒಂದು ನಿಮಿಷದ ಓದು | 348 ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದ ಕೇಂದ್ರ ಸರ್ಕಾರ

Mobile Applications Banned in India Image

ಸಾಮಾಜಿಕ ಮಾಧ್ಯಮದ ಸಹಾಯದಿಂದ ಬಳಕೆದಾರರ ವೈಯಕ್ತಿಕ ಮಾಹಿತಿಯನ್ನು ಕದಿಯುತ್ತಿದ್ದ ಮತ್ತು ಸೋರಿಕೆ ಮಾಡುತ್ತಿದ್ದ ಅಪ್ಲಿಕೇಶನ್‌ಗಳನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ. 

ಇತ್ತೀಚಿನ ದಿನಗಳಲ್ಲಿ ಚೀನಾ, ಜಪಾನ್‌ನಂತಹ ಕೆಲವು ರಾಷ್ಟ್ರಗಳಲ್ಲಿ ತಯಾರಾದ ಅಪ್ಲಿಕೇಶನ್‌ಗಳು ಬಳಕೆದಾರರ ಮಾಹಿತಿಯನ್ನು ಕದಿಯುತ್ತಿವೆ ಎಂದು ಸೈಬರ್ ಕ್ರೈಂಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಕೆಲವು ಅಪ್ಲಿಕೇಶನ್‌ಗಳ ಕಾರ್ಯಚರಣೆಯನ್ನು ನಿಲ್ಲಿಸಿದೆ. 

ಡೇಟಾ ಪ್ರಸರಣಗಳು ಭಾರತದ ಸಾರ್ವಭೌಮತೆ, ರಕ್ಷಣೆ ಮತ್ತು ರಾಜ್ಯದ ಭದ್ರತೆಯನ್ನು ಉಲ್ಲಂಘಿಸಿದ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸುವಂತೆ ಗೃಹ ವ್ಯವಹಾರಗಳ ಸಚಿವಾಲಯ ವಿನಂತಿಸಿತ್ತು. ಆ ವಿನಂತಿಯ ಆಧಾರದ ಮೇಲೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು 348 ಮೊಬೈಲ್ ಅಪ್ಲಿಕೇಶನ್‌ಗಳನ್ನು ನಿರ್ಬಂಧಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ರಾಜೀವ್ ಚಂದ್ರಶೇಖರ್ ತಿಳಿಸಿದ್ದಾರೆ. 

"ಕೆಲವು ಗೇಮಿಂಗ್ ಅಪ್ಲಿಕೇಶನ್‌ಗಳಾದ ʻಬ್ಯಾಟಲ್ ಗ್ರೌಂಡ್ಸ್ ಮೊಬೈಲ್ ಇಂಡಿಯಾʼ ಸೇರಿದಂತೆ ಇನ್ನು ಹಲವು ಅಪ್ಲಿಕೇಶನ್‌ಗಳನ್ನು ನಿಷೇಧಿಸಿದ ಬಳಿಕ ಸಾರ್ವಜನಿಕರಿಗೆ ಮಾಹಿತಿ ನೀಡಲಾಗಿದೆ" ಎಂದು ಅವರು ತಿಳಿಸಿದ್ದಾರೆ. 

ಮಾತ್ರವಲ್ಲದೆ, ಪುನಃ ಪ್ಲೇಸ್ಟೋರ್‌ ಮತ್ತು ಐಓಎಸ್‌ಗೆ ಆಗಮಿಸುತ್ತಿರುವ ಚೀನಾ ಅಪ್ಲಿಕೇಶನ್‌ಗಳನ್ನು ಪಟ್ಟಿ ಮಾಡಲು ಮಾಹಿತಿ ಸಚಿವಾಲಯ ಸಿದ್ಧವಾಗಿದೆ ಮತ್ತು ಪ್ರಸ್ತುತ ದಿನಗಳಲ್ಲಿ ಹರಡುತ್ತಿರುವ ನಕಲಿ ಮಾಹಿತಿಯನ್ನು ನಿಲ್ಲುಸುವ ನೂತನ ವ್ಯವಸ್ಥೆಯನ್ನೂ ಸಚಿವಾಲಯ ಮಾಡಲಿದೆ ಎಂದು ಹೇಳಿದ್ದಾರೆ. 

ನಿಮಗೆ ಏನು ಅನ್ನಿಸ್ತು?
0 ವೋಟ್