
- ಉಯಿಘರ್ ಸಮುದಾಯದ ಮಾನವ ಹಕ್ಕುಗಳ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ವಿಶ್ವಸಂಸ್ಥೆ ಕರಡು ನಿರ್ಣಯ
- 47 ಸದಸ್ಯರ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ 17 ಸದಸ್ಯರು ಪರವಾಗಿ ಮತ ಚಲಾವಣೆ
ಚೀನಾದ ಕ್ಸಿನ್ಜಿಯಾಂಗ್ ಪ್ರಕ್ಷ್ಯುಬ್ಧ ಪ್ರದೇಶದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯಲ್ಲಿ (ಯುಎನ್ಎಚ್ಆರ್ಸಿ) ಕರಡು ನಿರ್ಣಯದ ಮೇಲಿನ ಮತದಾನದಿಂದ ಗುರುವಾರ (ಅ. 6) ಭಾರತ ದೂರ ಉಳಿದಿದೆ.
ವಾಯುವ್ಯ ಚೀನಿ ಪ್ರಾಂತ್ಯದಲ್ಲಿ ಹದಗೆಡುತ್ತಿರುವ ಪರಿಸ್ಥಿತಿಯ ಬಗ್ಗೆ ಮಾನವ ಹಕ್ಕುಗಳ ಪರ ಸಮೂಹಗಳು ಹಲವು ವರ್ಷಗಳಿಂದ ಎಚ್ಚರಿಕೆ ನೀಡುತ್ತಿವೆ. ಉಯಿಘರ್ ಸಮುದಾಯದ 10 ಲಕ್ಷಕ್ಕೂ ಹೆಚ್ಚು ಜನರನ್ನು ಅವರ ಇಚ್ಛೆಗೆ ವಿರುದ್ಧವಾಗಿ ಬಂಧಿಸಲಾಗಿದೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತರು ಆರೋಪಿಸಿದ್ದಾರೆ.
"ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಉಯಿಘರ್ ಸಮುದಾಯದ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತು ಚರ್ಚೆ ನಡೆಸುವುದು" ಎಂಬ ಕರಡು ನಿರ್ಣಯವನ್ನು 47 ಸದಸ್ಯರ ಮಂಡಳಿಯಲ್ಲಿ 17 ಸದಸ್ಯರು ಪರವಾಗಿ ಮತ ಚಲಾಯಿಸಿದರೆ, 19 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ. ಭಾರತ, ಬ್ರೆಜಿಲ್, ಮೆಕ್ಸಿಕೋ ಮತ್ತು ಉಕ್ರೇನ್ ಸೇರಿದಂತೆ 11 ಸದಸ್ಯರು ಸಭೆಗೆ ಗೈರಾಗಿದ್ದಾರೆ.
ಈ ಸುದ್ದಿ ಓದಿದ್ದೀರಾ? ಅಮೆರಿಕ | ಭಾರತೀಯ ಮೂಲದ ವಿದ್ಯಾರ್ಥಿ ಹತ್ಯೆ: ಹಾಸ್ಟೆಲ್ ರೂಮ್ಮೇಟ್ ಪೊಲೀಸರ ವಶಕ್ಕೆ
ಕರಡು ನಿರ್ಣಯವನ್ನು ಕೆನಡಾ, ಡೆನ್ಮಾರ್ಕ್, ಫಿನ್ಲ್ಯಾಂಡ್, ಐಸ್ಲ್ಯಾಂಡ್, ನಾರ್ವೆ, ಸ್ವೀಡನ್, ಇಂಗ್ಲೆಂಡ್ ಮತ್ತು ಅಮೆರಿಕ ದೇಶಗಳನ್ನು ಒಳಗೊಂಡ ಸದಸ್ಯರ ಗುಂಪು ಒಪ್ಪಿಕೊಂಡಿವೆ.
ವಿಶ್ವಸಂಸ್ಥೆಯು ಇತಿಹಾಸದಲ್ಲೇ ಮೊದಲ ಬಾರಿಗೆ ಮಾನವ ಹಕ್ಕುಗಳ ಸಂಸ್ಥೆಯು ಚೀನಾದ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿಯನ್ನು ಚರ್ಚಿಸುವ ಪ್ರಸ್ತಾಪ ಪರಿಗಣಿಸಿದೆ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಕಾವಲು ಸಮಿತಿಯ ಚೀನಾ ನಿರ್ದೇಶಕಿ ಸೋಫಿ ರಿಚರ್ಡ್ಸನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.