ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ; 17 ಮಂದಿ ಸಾವು

  • ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಬೆಂಕಿ ಅವಘಡ
  • ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ

ಈಶಾನ್ಯ ಚೀನಾದ ರೆಸ್ಟೋರೆಂಟ್‌ನಲ್ಲಿ ಬುಧವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ 17 ಮಂದಿ ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಚಾಂಗ್ಚುನ್ ನಗರದ ರೆಸ್ಟೋರೆಂಟ್‌ನಲ್ಲಿ ಮಧ್ಯಾಹ್ನ ಬೆಂಕಿ 2:30ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಸ್ಥಳೀಯ ಸರ್ಕಾರ ವೈಬೋ ಎಂಬ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿ ಮಾಹಿತಿ ನೀಡಿದೆ. ಘಟನಾ ಸ್ಥಳಕ್ಕೆ ಧಾವಿಸಿದ  ಅಗ್ನಿಶಾಮಕ ದಳ ರಕ್ಷಣಾ ಕಾರ್ಯವನ್ನು ಪೂರ್ಣಗೊಳಿಸಿದರು ಎಂದು ಪೋಸ್ಟ್‌ ಮೂಲಕ ಮಾಹಿತಿ ನೀಡಿದ್ದಾರೆ.

ಈ ಅಗ್ನಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ತನಿಖೆ ನಡೆಯುತ್ತಿದೆ. ಬೆಂಕಿಯಲ್ಲಿ ಗಾಯಗೊಂಡಿರುವ ಅನೇಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ, ಮರಣೋತ್ತರ ಪ್ರಕ್ರಿಯೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಇರಾನ್‌ ಹಿಜಾಬ್‌ ಆಂದೋಲನ | ನಿಲ್ಲದ ಹಿಂಸಾಚಾರ; 75 ಮಹಿಳೆಯರು ಪೊಲೀಸ್ ದೌರ್ಜನ್ಯಕ್ಕೆ ಬಲಿ

ಚೀನಾದಲ್ಲಿ ಬೆಂಕಿ ಅವಘಡಗಳು ಸಂಭವಿಸುತ್ತಲೇ ಇರುತ್ತವೆ. ಈ ತಿಂಗಳ ಆರಂಭದಲ್ಲಿ, ಕೇಂದ್ರ ನಗರ ಚಾಂಗ್ಶಾದಲ್ಲಿ ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿಯಾದ 'ಚೀನಾ ಟೆಲಿಕಾಂ'ನ ಕಚೇರಿ ಹೊಂದಿರುವ ಗಗನಚುಂಬಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು.

ಆದರೆ, ಯಾವುದೇ ಸಾವು ನೋವು ವರದಿಯಾಗಿರಲಿಲ್ಲ. ಕಳೆದ ವರ್ಷ ಜುಲೈನಲ್ಲಿ, ಈಶಾನ್ಯ ಜಿಲಿನ್ ಪ್ರಾಂತ್ಯದಲ್ಲಿ ಗೋದಾಮಿನಲ್ಲಿ  ಬೆಂಕಿ ಹೊತ್ತಿಕೊಂಡು 15 ಮಂದಿ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದರು ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಅದಕ್ಕೂ ಒಂದು ತಿಂಗಳ ಮೊದಲು, ಮಧ್ಯ ಹೆನಾನ್ ಪ್ರಾಂತ್ಯದ ಕರಾಟೆ ಶಾಲೆಯಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಮಕ್ಕಳು ಸೇರಿದಂತೆ 18 ಮಂದಿ ಸಾವಿಗೀಡಾಗಿದ್ದರು.

ನಿಮಗೆ ಏನು ಅನ್ನಿಸ್ತು?
0 ವೋಟ್