ಇಂಡೋನೇಷ್ಯಾ ಭೂಕಂಪ : ಮೃತರ ಸಂಖ್ಯೆ 268ಕ್ಕೆ ಏರಿಕೆ

Indonesia-earthquake
  • ಕಲ್ಲು ಮಣ್ಣಿನ, ರಾಶಿ ಬಿದ್ದಿದ್ದು ರಸ್ತೆ ಸಂಚಾರಕ್ಕೆ ನಿರ್ಬಂಧ
  • ಭೂಕಂಪದಿಂದಾಗಿ ಹಲವೆಡೆ ಭೂಕುಸಿತ ಮತ್ತು ಕಟ್ಟಡ ಕುಸಿತ

ಇಂಡೊನೇಷ್ಯಾದ ಜಾವಾ ದ್ವೀಪದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಮೃತಪಟ್ಟವರ ಸಂಖ್ಯೆ 268ಕ್ಕೇರಿದೆ. ಕುಸಿದು ಬಿದ್ದ ಕಟ್ಟಡಗಳಡಿ ಇನ್ನೂ ಕೆಲವರು ಸಿಲುಕಿರುವ ಶಂಕೆಯಿದ್ದು, ಅವರಿಗಾಗಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭೂಕಂಪದಿಂದಾಗಿ ಹಲವೆಡೆ ಭೂಕುಸಿತ ಮತ್ತು ಕಟ್ಟಡ ಕುಸಿತದಿಂದಾಗಿ ರಸ್ತೆಯ ಮೇಲೆ ಕಲ್ಲು ಮಣ್ಣಿನ ರಾಶಿ ಬಿದ್ದಿದ್ದು ರಸ್ತೆ ಸಂಚಾರವನ್ನು ನಿರ್ಬಂಧಗೊಳಿಸಲಾಗಿದೆ.

ಭಾರೀ ಪ್ರಮಾಣದಲ್ಲಿ ಕಟ್ಟಡಗಳ ಅವಶೇಷ ರಾಶಿ ಬಿದ್ದಿರುವುದರಿಂದ ಶೋಧ ಮತ್ತು ರಕ್ಷಣಾ ಕಾರ್ಯಕ್ಕೆ ತಡೆಯಾಗಿದ್ದು ಕನಿಷ್ಠ 151 ಮಂದಿ ನಾಪತ್ತೆಯಾಗಿದ್ದಾರೆ. 1000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಸಂತ್ರಸ್ತರ ಶೋಧ ಮತ್ತು ರಕ್ಷಣಾ ಕಾರ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?  ಜೆರುಸಲೆಮ್‌ನಲ್ಲಿ ಅವಳಿ ಬಾಂಬ್‌ ಸ್ಫೋಟ; ಬಬ್ಬ ಸಾವು, 14 ಮಂದಿಗೆ ಗಾಯ

ಸೋಮವಾರ ಸಂಭವಿಸಿದ 5.6 ತೀವ್ರತೆಯ ಭೂಕಂಪ ಇಂಡೋನೇಷ್ಯಾದ ಹೆಚ್ಚು ಜನಸಂಖ್ಯೆ ಹೊಂದಿರುವ ಪಶ್ಚಿಮ ಜಾವದ ಸಿಯಾಂಜರ್ ನಗರದ ಬಳಿಯಲ್ಲಿ ಕೇಂದ್ರೀಕೃತವಾಗಿತ್ತು. ಈ ನಗರದಲ್ಲಿ ಅತ್ಯಧಿಕ ಹಾನಿ, ಸಾವು ನೋವು ಸಂಭವಿಸಿದೆ. ಶಾಲೆಯ ಕಟ್ಟಡ ಕುಸಿದ ಕಾರಣ ಹಲವು ಮಕ್ಕಳು ಮೃತಪಟ್ಟಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಮುಖ್ಯಸ್ಥ ಸುಹರ್ಯಂತೊ ಹೇಳಿದ್ದರು.

ಭೂಕಂಪದಲ್ಲಿ ಸಂತ್ರಸ್ತರಾದವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಇಂಡೊನೇಷ್ಯಾ ಅಧ್ಯಕ್ಷ ಜೋಕೊ ವಿಡೋಡೊ ಘೋಷಿಸಿದ್ದಾರೆ. ಮಂಗಳವಾರ ಸಿಯಾಂಜರ್ ನಗರಕ್ಕೆ ಭೇಟಿ ನೀಡಿ ಭೂಕಂಪದಿಂದ ಹಾನಿಗೊಳಗಾದ ಪ್ರದೇಶದ ವೀಕ್ಷಣೆ ನಡೆಸಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
Image
av 930X180