ವಿಶ್ವಸಂಸ್ಥೆ ಸಾಮಾನ್ಯ ಸಭೆ | ಹಲವು ದೇಶಗಳು ಭಾರತವನ್ನು ಉಲ್ಲೇಖಿಸಿವೆ ಜೈಶಂಕರ್

  • ರಷ್ಯಾ- ಉಕ್ರೇನ್ ಯುದ್ಧದಲ್ಲಿ ಭಾರತ ಶಾಂತಿಯ ಪರ
  • ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಬೆಂಬಲ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಅನೇಕ ದೇಶಗಳು ಈ ಬಾರಿ ಭಾರತವನ್ನು ಉಲ್ಲೇಖಿಸಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.  

ವಿಶ್ವಸಂಸ್ಥೆ  ಸಾಮಾನ್ಯ ಸಭೆಯಲ್ಲಿ ಭಾರತದ ಹೆಸರನ್ನು ಹಲವು ದೇಶಗಳು ಉಲ್ಲೇಖಿಸುವುದು ಸಣ್ಣ ವಿಷಯವಲ್ಲ. ಈ ಬದಲಾವಣೆಯಿಂದ ಭಾರತಕ್ಕೆ ಖಾಯಂ ಸದಸ್ಯ ಸ್ಥಾನ ಸಿಗುವ ನಿರೀಕ್ಷೆಯಿದೆ ಎಂದು ಜೈ ಶಂಕರ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Eedina App

 ಈ ಸುದ್ದಿ ಓದಿದ್ದೀರಾ? ಹಿಜಾಬ್‌ ಇರಾನ್‌ ಅಂದೋಲನ | ಮುಂದುವರಿದ ಪ್ರತಿಭಟನೆಗೆ ಬಲಿಯಾದವರ ಸಂಖ್ಯೆ 50ಕ್ಕೆ ಏರಿಕೆ

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯತ್ವಕ್ಕಾಗಿ ಭಾರತವನ್ನು ರಷ್ಯಾ ವಿದೇಶಾಂಗ ಸಚಿವ ಸೆರ್ಗೆ ಲಾವ್ರೊವ್ ಕೂಡ ಬೆಂಬಲಿಸಿದ್ದಾರೆ. ತಮ್ಮ ಭಾಷಣದಲ್ಲಿ ಭಾರತ ಮತ್ತು ಬ್ರೆಜಿಲ್ ರಾಷ್ಟ್ರಗಳಿಗೆ ಖಾಯಂ ಸ್ಥಾನ ಸಿಗಬೇಕು ಎಂದು ಹೇಳಿದ್ದರು.

AV Eye Hospital ad

ಭಾರತ ಶಾಂತಿಯ ಪರವಿರುವ ದೇಶ

ರಷ್ಯಾ- ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಉಂಟಾದ ಆಹಾರ, ಇಂಧನ ಹಾಗೂ ರಸಗೊಬ್ಬರಗಳ ಬಿಕ್ಕಟ್ಟಿನ ಬಗ್ಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್‌ ಕಳವಳ ವ್ಯಕ್ತಪಡಿಸಿದ್ದಾರೆ. ರಷ್ಯಾ-ಉಕ್ರೇನ್ ಯುದ್ಧದಲ್ಲಿ ಭಾರತವು ಶಾಂತಿಯ ಪರವಾಗಿದೆ ಎಂದು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ವಿಶ್ವಸಂಸ್ಥೆಯ ನಿರ್ಬಂಧಗಳಿಂದ ಪಾಕಿಸ್ತಾನ ಮೂಲದ ಭಯೋತ್ಪಾದಕರನ್ನು ಕಾಪಾಡುತ್ತಿರುವ ಚೀನಾವನ್ನು ಜೈಶಂಕರ್ ಟೀಕಿಸಿದ್ದಾರೆ. ದಶಕಗಳಿಂದ ಗಡಿಯಾಚೆಗಿನ ಭಯೋತ್ಪಾದನೆಯ ಭಾರವನ್ನು ಹೊತ್ತಿರುವ ಭಾರತವು ‘ಶೂನ್ಯ- ಸಹಿಷ್ಣುತೆ’ ವಿಧಾನವನ್ನು ದೃಢವಾಗಿ ಪ್ರತಿಪಾದಿಸುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ.

ನಿಮಗೆ ಏನು ಅನ್ನಿಸ್ತು?
0 ವೋಟ್
eedina app